ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ..

IMG-20230415-WA0014
Published on

ಹಾವೇರಿ: ಶಿಗ್ಗಾಂವಿ ತಾಲೂಕು ಆಡಳಿತ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ಶಿಗ್ಗಾಂವಿ ಗ್ರಾಮದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ, ಚನ್ನಮ್ಮ ವೃತ್ತದಲ್ಲಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣ ಮಾಡಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಿಎಂಗೆ ಸಚಿವ ಸಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ, ಹಾವೆಮುಲ್ ಅಧ್ಯಕ್ಷ ಬಸವರಾಜ ಅರಬಗೊಂಡ, ಪುತ್ರ ಭರತ ಬೊಮ್ಮಾಯಿ, ಇತರರು ಸಾಥ್ ನೀಡಿದರು.

ಬಿಗಿ ಭದ್ರತೆ :
ಸಿಎಂ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ತಹಸೀಲ್ದಾರ್ ಕಚೇರಿಯಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net