ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ

17HDK00005
Published on

ಎಚ್.ಡಿ.ಕೋಟೆ: ಸಾಂಕ್ರಾಮಿಕ ರೋಗ ಹರಡದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.

ತಾಲೂಕಿನ ಹುಲಿಕುರ ಗ್ರಾಮದಲ್ಲಿ ಗ್ರಾಮದ ಶ್ರೀ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರು ಪೂರೈಸುವ ಸಂಬಂಧ ಈಗಾಗಲೇ ಆರೋಗ್ಯ ಇಲಾಖೆಯಿಂದ ನೀರನ್ನು ಪರೀಕ್ಷೆಗೆ ಕಳುಹಿಸಿದಾಗ ನೀರು ಕುಡಿಯಲು ಯೋಗ್ಯವಾಗಿದೆ ಎಂದು ವರದಿ ಬಂದಿದೆ. ನೀರಿನ ಟ್ಯಾಂಕ್ ಅನ್ನು ಕ್ಲೋರಿನೇಷನ್ ಮಾಡಿಸಲಾಗಿದೆ. ಆರೋಗ್ಯ ಇಲಾಖೆಯಿಂದ ತಾತ್ಕಾಲಿಕ ಆಸ್ಪತ್ರೆ ತೆರೆದು ಸಿಬ್ಬಂದಿ ನಿಯೋಜಿಸಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ಎಂದರು.

ವ್ಯಾಪಾರಿಗಳು ಸಿಹಿ ತಿಂಡಿಗಳನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಿಟ್ಟು ಮಾರಬೇಕು. ಸಾರ್ವಜನಿಕರಿಗೆ ನೀಡುವ ಪ್ರಸಾದವನ್ನು ಶುದ್ಧ ನೀರಿನಿಂದ ತಯಾರಿಸಬೇಕು. ಪ್ರಸಾದವನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ವೈದ್ಯರಾದ ಡಾ.ಸೋಮಣ್ಣ, ಡಾ.ಕೀರ್ತಿ, ಸಿಬ್ಬಂದಿ ನಾಗೇಂದ್ರ, ರವಿರಾಜ್, ಅರಳಪ್ಪ, ನಾಗರಾಜು, ಉಮೇಶ್, ಜಗದೀಶ್, ನಾಗಮ್ಮ, ಶ್ಯಾಮಾಲಾ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net