ಸಾಂಕ್ರಾಮಿಕ ರೋಗಗಳಿಂದ ದೂರವಿರುವುದು ಅಗತ್ಯ

30ark-2
ಅರಕಲಗೂಡು ತಾಲೂಕಿನ ಬಸವಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಎ.ಮಂಜು ಭೇಟಿ ನೀಡಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ಡಾ. ಅನಿಲ್ ಕುಮಾರ್, ಡಾ. ಸುದರ್ಶನ್, ಲೋಕೇಶ್ ಇತರರಿದ್ದರು.
Published on

ಅರಕಲಗೂಡು: ಮಳೆಗಾಲವಾಗಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ದೃಷ್ಟಿಯಿಂದ ಎಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು.

ತಾಲೂಕಿನ ಬಸವಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇತ್ತೀಚೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಶುಚಿತ್ವದ ಬಗ್ಗೆ ನಿವಾಸಿಗಳಿಗೆ ಮಾಹಿತಿ ನೀಡಬೇಕು. ಸ್ವಚ್ಛತೆಗೆ ಹೆಚ್ಚು ಒತ್ತು ನೀಡಿದರೆ ರೋಗ ರುಜಿನಗಳಿಂದ ದೂರ ಉಳಿಯಬಹುದು ಎಂದರು.

ಆಸ್ಪತ್ರೆಗೆ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ಕೇರಳಾಪುರ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಬಸವಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿಗೆ 4 ಲಕ್ಷ ರೂ.ಅನುದಾನ ಮಂಜೂರಾಗಿದ್ದು, ಮಳೆ ನೀರು ಸೋರದಂತೆ ಕಟ್ಟಡದ ಛಾವಣಿ ದುರಸ್ತಿ ಪಡಿಸಿಕೊಳ್ಳುವಂತೆ ವೈದ್ಯರಿಗೆ ಸೂಚಿಸಿದರು.

ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್, ಡಾ. ಸುದರ್ಶನ್, ಆರೋಗ್ಯ ನಿರೀಕ್ಷಕ ಲೋಕೇಶ್, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net