ಸಾಂಬ್ರಾ-ಬಸರಿಕಟ್ಟಿ ರಸ್ತೆ ನಿರ್ಮಾಣಕ್ಕೆ 5 ಕೋಟಿ ರೂ.

9Manju6-Web
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರನ್ನು ಸಾಂಬ್ರಾ ಗ್ರಾಮಸ್ಥರು ಅಭಿನಂದಿಸಿದರು. ಗ್ರಾಪಂ ಸದಸ್ಯರಾದ ಮಾರುತಿ ಜೋಗಾಣಿ, ಮಲ್ಲಪ್ಪ ಕಾಂಬಳೆ, ಶಂಕರ ಯಡ್ಡಿ, ವಿಕ್ರಮ ಸೋನೋಜಿ, ಮಹೇಂದ್ರ ರಥಕಾರ, ಪುಂಡಲೀಕ ಜತ್ರಾಟಿ, ನಿತಿನ ದೇಸಾಯಿ, ಗ್ರಾಪಂ ಮಾಜಿ ಅಧ್ಯಕ್ಷ ವಿಲಾಸ ಖನಗಾಂವಕರ, ಮಹೇಶ ಜತ್ರಾಟಿ ಇತರರಿದ್ದರು.
Published on

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸಾಂಬ್ರಾ ಗ್ರಾಮದಿಂದ ಬಸರಿಕಟ್ಟಿ ಗ್ರಾಮದವರೆಗೆ ರಸ್ತೆ ನಿರ್ಮಿಸಲು 5 ಕೋಟಿ ರೂ. ಅನುದಾನ ಮಂಜೂರು ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಅವರು ಮಾತನಾಡಿ, ರಸ್ತೆ ನಿರ್ಮಿಸಲು ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net