ಸಾಂವಿಧಾನಿಕ ಹಕ್ಕನ್ನು ಪ್ರಾಮಾಣಿಕವಾಗಿ ಚಲಾಯಿಸಿ

11blrp1
ಬೇಲೂರಿನ ಚನ್ನಕೇಶವಸ್ವಾಮಿ ದೇಗುಲ ಆವರಣದಲ್ಲಿ ಮತದಾನ ಜಾಗೃತಿ ಜಾಥಾಗೆ ಗಣ್ಯರು ಚಾಲನೆ ನೀಡಿದರು. ಸಾಲುಮರದ ತಿಮ್ಮಕ್ಕ, ಗ್ಯಾರಂಟಿ ರಾಮಣ್ಣ ಇದ್ದರು.
Published on

ಬೇಲೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಅರಿವು ಕಾರ್ಯಕ್ರಮಕ್ಕೆ ಚುನಾವಣಾ ರಾಯಭಾರಿಗಳಾದ ಸಾಲುಮರದ ತಿಮ್ಮಕ್ಕ ಹಾಗೂ ಗ್ಯಾರಂಟಿ ರಾಮಣ್ಣ ಚನ್ನಕೇಶವಸ್ವಾಮಿ ದೇಗುಲ ಆವರಣದಲ್ಲಿ ಚಾಲನೆ ನೀಡಿದರು.

ಸ್ವೀಪ್ ಸಮಿತಿಯಿಂದ ಮಂಗಳವಾರ ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಸಾಲುಮರದ ತಿಮ್ಮಕ್ಕ, ಎಲ್ಲರೂ ತಮಗೆ ಸಿಕ್ಕಿರುವ ಸಾಂವಿಧಾನಿಕ ಹಕ್ಕನ್ನು ಪ್ರಾಮಾಣಿಕವಾಗಿ ಚಲಾವಣೆ ಮಾಡಬೇಕು ಹಾಗೂ ಯಾವುದೇ ಅಮಿಷಗಳಿಗೆ ಬಲಿಯಾಗಬಾರದು ಎಂದರು.

ಸಹಾಯಕ ಚುನಾವಣಾಧಿಕಾರಿ ಎಂ.ಮಮತಾ ಮಾತನಾಡಿ, ಬೇಲೂರು ಕ್ಷೇತ್ರದಲ್ಲಿ 273 ಮತಗಟ್ಟೆಗಳಿದ್ದು, ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ಮತಯಂತ್ರಗಳು ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೊಠಡಿಯಲ್ಲಿ ಭದ್ರವಾಗಿದೆ. ಬೇಲೂರು ತಾಲೂಕಿನ ಐದು ಕಡೆ ಚೆಕ್‌ಪೋಸ್ಟ್ ನಿರ್ಮಿಸಲಾಗಿದ್ದು, ತಪಾಸಣೆ ನಡೆಯುತ್ತಿದೆ. ಚುನಾವಣಾ ಆಯೋಗದ ಆದೇಶದಂತೆ ಮತದಾನದಿಂದ ಯಾರೂ ಹೊರಗುಳಿಯಬಾರದು ಎಂದರು.

ಸ್ವೀಪ್ ಸಮಿತಿ ಅಧ್ಯಕ್ಷೆ ಸುನೀತಾ ಮಾತನಾಡಿ, ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಬೇಕು. ತಾಲೂಕಿನ 37 ಗ್ರಾಮ ಪಂಚಾಯಿತಿಗಳ ಪೈಕಿ 30 ಗ್ರಾಪಂನಲ್ಲಿರುವ ಆಟೋ ಟಿಪ್ಪರ್‌ಗಳಿಗೆ ಬ್ಯಾನರ್ ಹಾಗೂ ಧ್ವನಿವರ್ಧಕ ಬಳಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಮತದಾನ ಒಂದು ಪವಿತ್ರ ಕಾರ್ಯವಾಗಿದ್ದು, ಮತದಾನದಲ್ಲಿ ಭಾಗವಹಿಸಬೇಕು ಎಂದರು.

ಪರಿಸರ ರಾಯಭಾರಿ ಗ್ಯಾರಂಟಿ ರಾಮಣ್ಣ, ತಹಸೀಲ್ದಾರ್ ಗ್ರೇಡ್-2 ಅಶೋಕ್‌ಕುಮಾರ್, ಶಿರಸ್ತೇದಾರರಾದ ರಂಗನಾಥ್, ಮೋಹನ್‌ಕುಮಾರ್, ಕಂದಾಯಾಧಿಕಾರಿ ಪ್ರಕಾಶ್, ತಾಪಂ ಅಧಿಕಾರಿಗಳಾದ ನಂದಕುಮಾರ್, ದಿನೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net