ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಿ

28mlk1
ಮೇಲುಕೋಟೆಯ ಪುತಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ, ಉದ್ಘಾಟಿಸಿದರು. ಡಾ.ಎಚ್.ಎಲ್.ನಾಗರಾಜು ಇದ್ದರು.
Published on

ಮೇಲುಕೋಟೆ: ವೈರಮುಡಿ ಬ್ರಹ್ಮೋತ್ಸವ ಪ್ರಯುಕ್ತ ಪುತಿನ ಕಲಾಮಂದಿರದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮಗಳಲ್ಲಿ ಸ್ಥಳೀಯರು ಭಾಗವಹಿಸುವ ಮೂಲಕ ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.

ಧಾರ್ಮಿಕದತ್ತಿ ಹಾಗೂ ಕನ್ನಡಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ವೈರಮುಡಿ ಬ್ರಹ್ಮೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮ ಮಹೋತ್ಸವದ ಒಂದು ಭಾಗ. ಏಳು ದಿನ ನಡೆಯುವ ಕಾರ್ಯಕ್ರಮದಲ್ಲಿ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕು. ಈ ವರ್ಷ ವೈರಮುಡಿ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ರಸಸಂಜೆಯಂತ ಅನಗತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲಾಗಿದೆ. ಜಿಲ್ಲೆಯ ಸಾಂಸ್ಕೃತಿಕ ಸೊಗಡಿನ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಲಾಗಿದೆ. ಜನಪದ, ಶಾಸ್ತ್ರೀಯ, ಸುಗಮ ಸಂಗೀತ, ದಾಸರಪದಗಳು…ಹೀಗೆ ಭಾರತೀಯ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಕಲಾವಿದರಿಗೆ ಲಘು ಉಪಾಹಾರದ ವ್ಯವಸ್ಥೆಯನ್ನು ಸಂಘಟಕರು ಮಾಡಬೇಕು. ಸ್ಥಳೀಯ ಶಿಕ್ಷಣ ಸಂಸ್ಥೆಯ ವಾಹನಗಳನು ್ನಬಳಸಿಕೊಂಡು ಸುತ್ತಮುತ್ತಲ ಹಳ್ಳಿಗಳಿಂದ ಜನರನ್ನು ಕರೆತರಬೇಕು ಎಂದರು.

ವೇದಿಕೆಯಲ್ಲಿ ಉಪವಿಭಾಗಾಧಿಕಾರಿ ನಂದೀಶ್, ತಹಸೀಲ್ದಾರ್ ಸೌಮ್ಯಾ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್, ಮುಜರಾಯಿ ತಹಸೀಲ್ದಾರ್ ಉಮಾ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿ ಚಾಮಲಾಪುರ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net