ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳು

ಚಿತ್ರ 14ಎಸ್ ಡಿ ಪಿ 01
Published on

ಸಿದ್ದಾಪುರ : ಚಟ್ಟಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಗುರುವಾರ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಇಕ್ರಾ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ಸಂಭ್ರಮದಿಂದ ನೆರವೇರಿತು. ಒಂದರಿಂದ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳು ಛದ್ಮವೇಷ, ಗಾಯನ, ಸಾಮೂಹ ನೃತ್ಯ, ಜಾನಪದ ನೃತ್ಯ, ಚಿತ್ರಕಲೆ, ಕಥೆ, ಭಾಷಣ, ಭಕ್ತಿಗೀತೆ, ಜನಪದ ಗೀತೆ, ರಂಗೋಲಿ ಮತ್ತಿತರ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನೆರೆದವರ ಗಮನ ಸೆಳೆದರು.
ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಮಹತ್ವದ ವೇದಿಕೆ ಎಂದರು. ಶಿಕ್ಷಣದೊಂದಿಗೆ ಮಕ್ಕಳ ಸಾಂಸ್ಕೃತಿಕ ಪ್ರತಿಭೆಗಳೂ ಹೊರ ಬರಬೇಕು ಎಂದು ಅವರು ಹೇಳಿದರು. ಇಕ್ರಾ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಅಬ್ದುಲ್ ಮಜೀದ್ ಅಧ್ಯಕ್ಷತೆ ವಹಿಸಿದ್ದರು. ಸಿದ್ದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷೆ ನಮಿತಾ ಅಯ್ಯಪ್ಪ, ಕ್ಲಸ್ಟರ್ ಮಟ್ಟದ ಸಿಆರ್‌ಪಿ ಅಶೋಕ್ ಹಾಜರಿದ್ದರು. 15ಕ್ಕೂ ಹೆಚ್ಚು ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net