

ಬಾಗಲಕೋಟೆ: ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಽಕಾರಿಗಳು ಆಗಿರುವ ಜಿಲ್ಲಾ ಲೋಕ ಶಿಕ್ಷಣ ಸಮಿತಿಯ ಅಧ್ಯಕ್ಷ ಜಾನಕಿ ಕೆ.ಎಂ. ಗುರುವಾರ ಸಾಕ್ಷರತಾ ಧ್ವಜಾರೋಣ ನೇರವೇರಿಸಿದರು.
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ನಂತರ ಕರ್ನಾಟಕವನ್ನು ಸಾಕ್ಷರ ಸಮೃದ್ದ, ಸುಸ್ಥಿರ ಮತ್ತು ಅಭಿವೃದ್ಧಿ ನಾಡನ್ನಾಗಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರ ಮನೆ ಹಾಗೂ ಮನವನ್ನು ತಲುಪಿ, ಮಹಿಳೆ ಮತ್ತು ಶಿಕ್ಷಣ ವಂಚಿತ ವರ್ಗದವರ ಕಲಿಕೆಗಾಗಿ ಜನಾಂದೋಲನಗೊಳ್ಳಲು ಕಾಯಾ, ವಾಚಾ, ಮನಸಾ ಪಾಲ್ಗೊಂಡು ಸೇವೆ ಸಲ್ಲಿಸುವ ಸಂಕಲ್ಪ ಮಾಡಿಕೊಂಡಿದ್ದೇನೆ ಎಂದು ಬೋಽಸಿದರು.
ನವಸಾಕ್ಷರರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಜಿ.ಪಂ ಸಿಇಒ ಶಶಿಧರ ಕುರೇರ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಶಿಕ್ಷಣ ಇಲಾಖೆಯ ಉಪ ಸಮನ್ವಯಾಽಕಾರಿ ಸಿ.ಆರ್.ಓಣಿ, ಜಿಲ್ಲಾ ವಯಸ್ಕರ ಶಿಕ್ಷಣಾಽಕಾರಿ ಎಚ್.ಜಿ.ಮಿರ್ಜಿ, ಕಾರ್ಯಕ್ರಮ ಸಹಾಯಕಿ ಎಸ್.ಎನ್.ಕಲಬಿರ್ಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.