ಸಾಧಕರಿಗೆ ಪ್ರಶಸ್ತಿ ನೀಡಿ ಗೌರವ

IMG-20221024-WA0023
Published on

ಮೈಸೂರು: ರಾಸಾ ಕನ್ನಡ ಮತ್ತು ಕಲಾ ಸಂಸ್ಕೃತಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಹಿಳೆಯರು, ಮಕ್ಕಳು, ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ವಿಜಯನಗರ 1ನೇ ಹಂತದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ‘ಕರ್ನಾಟಕ ಸೇವಾ ರತ್ನ ಪ್ರಶಸ್ತಿ 2022’ಯನ್ನು ಬೆಳಗಾವಿಯ ರೇಖಾ ಜಿ.ನಾಯಕ್ ಅವರಿಗೆ ನೀಡಲಾಯಿತು.

ಕರ್ನಾಟಕ ಬಾಲರತ್ನ ಪ್ರಶಸ್ತಿ 2022 ಅನ್ನು ಶ್ರೇಯಾ, ಸಿದ್ಧಾರ್ಥ್ ಶೆಟ್ಟಿ ಹಾಗೂ ಶ್ರೇಯಸ್‌ಗೆ ನೀಡಿ ಗೌರವಿಸಲಾಯಿತು. ಇದೇ ವೇಳೆ ವಿವಿಧ ಜಿಲ್ಲೆಗಳ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಿದ್ದ ಶ್ರೀಕೃಷ್ಣ ವೇಷಧಾರಿ ಮಕ್ಕಳ ಫೋಟೋ ಸ್ಪರ್ಧೆಯ ವಿತರಿಗೆ ಪ್ರಶಸ್ತಿ ವಿತರಿಸಲಾಯಿತು.
ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಮೇಯರ್ ಶಿವಕುಮಾರ್, ಟ್ರಸ್ಟ್ ಅಧ್ಯಕ್ಷ ರಾಸಾ ಆರ್.ಈಶ್ವರ್, ಟ್ರಸ್ಟಿ ಹೇಮಾ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net