

ತುಮಕೂರು: ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಪ್ರಗತಿ ಮತ್ತು ವ್ಯಕ್ತಿತ್ವ ಬೆಳೆಸುವಲ್ಲಿ ನಮ್ಮ ಸಂಸ್ಥೆ ಬದ್ಧವಾಗಿದೆ ಎಂದು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ.ಪಾರಸ್ಮಲ್ ಹೇಳಿದರು.
ನಗರದ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯಲ್ಲಿ 2024&-25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಶ್ರದ್ಧೆ, ಏಕಾಗ್ರತೆ ಯಿಂದ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಗುರುಗಳ ಮಾರ್ಗದರ್ಶನಲ್ಲಿ ವಿದ್ಯಾರ್ಥಿಗಳು ಸಾಗಬೇಕು ಎಂದರು.
ಶಾಲೆಯ ಹಳೆಯ ವಿದ್ಯಾರ್ಥಿ ರಾಜೀವ್ ವೇಲೂರ್ ಮಾತನಾಡಿ, ಪ್ರತಿಭೆ ಸಾಧಕನ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ. ಯಶಸ್ಸು ಮತ್ತು ವೈಫಲ್ಯ ಎರಡನ್ನೂ ಸೌಜನ್ಯದಿಂದ ಪ್ರತಿಯೊಬ್ಬರೂ ಸ್ವೀಕರಿಸಬೇಕು. ಶಿಕ್ಷಕರು, ಪಾಲಕರು ಮತ್ತು ಸಮಾಜವನ್ನು ಗೌರವಿಸುವುದು ಮುಖ್ಯ. ಸೋಷಿಯಲ್ ಮೀಡಿಯಾಗಳಿಂದ ದೂರವಿದ್ದು, ತಮ್ಮ ಗುರಿಯ ಕಡೆಗೆ ಮನಸ್ಸನ್ನು ಕೇಂದ್ರೀಕೃತಗೊಳಿಸಿಕೊಳ್ಳುವಂತೆ ಸಲಹೆ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಚನ್ನಬಸವಪ್ರಸಾದ್, ಜಂಟಿ ಕಾರ್ಯದರ್ಶಿ ಡಾ.ಟಿ.ಆರ್.ಸಾಯಿಪ್ರಸಾದ್, ಆಡಳಿತ ಮಂಡಳಿಯ ಕೆ.ಜಿ.ಮುನಿಗಂಗಪ್ಪ,ಕೆ.ವಿ.ಶ್ರೀನಿವಾಸ್, ಸುರೇಂದ್ರ ಷಾ ಮತ್ತು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ವಿವಿಧ ಶಾಲಾ ಕಾಲೇಜುಗಳ ಮುಖ್ಯಸ್ಥರು ಉಪಸ್ಥಿತರಿದ್ದರು.