ಸಾಧನೆಗೆ ಸತತ ಅಭ್ಯಾಸ ಮುಖ್ಯ

2ark-5
Published on

ಅರಕಲಗೂಡು: ತಾಲೂಕಿನ ಬಸವಾಪಟ್ಟಣದ ಎಚ್‌ಎಂಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ಬುಧವಾರ ಸ್ವಾಗತ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿತ್ತು.


ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಸಿಡಿಸಿ ಉಪಾಧ್ಯಕ್ಷ ಮಹೇಂದ್ರಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಇಟ್ಟುಕೊಂಡು ಸತತ ಅಭ್ಯಾಸ ಮಾಡುವ ಮೂಲಕ ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.


ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲೆ ಲತಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕೃಷ್ಣಶೆಟ್ಟಿ, ಜಯಶಂಕರ್, ನಿರ್ವಾಣಿಗೌಡ, ಕುಮಾರ್, ಹೇಮಂತ್ ಕುಮಾರ್, ಕುಸುಮ, ಮಹೇಶ್, ರಮ್ಯಾ, ಪುಟ್ಟಸ್ವಾಮಿ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net