

ಚಿತ್ರದುರ್ಗ: ಜಾತಿ ವ್ಯವಸ್ಥೆಯನ್ನು ಧಿಕ್ಕರಿಸಿ, ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದ ದಾರ್ಶನಿಕರನ್ನು ಆಯಾ ಜಾತಿ ವ್ಯವಸ್ಥೆಗೆ ಕಟ್ಟಿ ಹಾಕುತ್ತಿರುವುದು ವಿಷಾದನೀಯ ಎಂದು ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯ ಡಾ.ಶ್ರೀ ಬಸವಕುಮಾರ ಸ್ವಾಮೀಜಿ ಹೇಳಿದರು.
ಶ್ರೀಮಠದ ಬೃಹನ್ಮಠದ ಕರ್ತೃಗದ್ದಿಗೆ ಬಳಿ ಸೋಮವಾರ ಏರ್ಪಡಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿಯಲ್ಲಿ ಮಾತನಾಡಿ, ವಚನ ಸಾಹಿತ್ಯದ ನಂತರ ದಾಸ ಸಾಹಿತ್ಯ ಸಾಮಾಜಿಕ ಸಾಮರಸ್ಯಕ್ಕೆ ಶ್ರಮಿಸಿದೆ ಎಂದರು. ಶ್ರೀಮಠದ ವಿದ್ಯಾರ್ಥಿಗಳು ವಚನ, ತತ್ವ ಪದಗಳನ್ನು ಹಾಡಿದರು. ವಿಜಯದೇವರು ಸ್ವಾಗತಿಸಿ, ಎಸ್. ಆನಂದ್ ವಂದಿಸಿದರು. ನವೀನ್ ಮಸ್ಕಲ್ ನಿರೂಪಿಸಿದರು.