ಸಾಮರಸ್ಯದೊಂದಿಗೆ ಹಬ್ಬ ಆಚರಿಸಿ

28ydg01
Published on


ಯಾದಗಿರಿ: ಜಿಲ್ಲಾಡಳಿತ, ಪೊಲೀಸ್ ಇಲಾಖೆ ನೀಡುವ ಸಾಮಾನ್ಯ ನಿದರ್ೇಶನಗಳೊಂದಿಗೆ ಬಕ್ರೀದ್ ಹಬ್ಬವನ್ನು ಸಾಮರಸ್ಯದೊಂದಿಗೆ ಆಚರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ಸಿ.ಬಿ.ವೇದಮೂತರ್ಿ ಸಲಹೆ ನೀಡಿದರು.

ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಕರೆದಿದ್ದ ಶಾಂತಿಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಕರ್ಾರದ ಆದೇಶ ಪಾಲಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಕಾನೂನಿಗೆ ಧಕ್ಕೆ ತರದ ರೀತಿ ಶಾಂತಿಯಿಂದ ಹಬ್ಬ ಆಚರಿಸಬೇಕು ಎಂದರು.

ಕನರ್ಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅನಿಯಮ. 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುಬರ್ಾನಿಯನ್ನು ನೆರವೇರಿಸಬೇಕು. ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ, ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಸಲಾಗಿದೆ ಎಂದರು.

ಜಿಲ್ಲಾಡಳಿತ, ಸ್ಥಳೀಯ ಆಡಳಿತ ಸಂಸ್ಥೆಗಳಿಂದ ನಿಗದಿಪಡಿಸಲಾದ ಸ್ಥಳಗಳಲ್ಲಿ ಮಾತ್ರ ಖುಬರ್ಾನಿಯನ್ನು ನೆರವೇರಿಸಬೇಕು. ಪ್ರಾಣಿ ತ್ಯಾಜ್ಯವನ್ನು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಹಬ್ಬದ ಆಚರಣೆ ಕುರಿತು ರಾಜ್ಯ ಸಕರ್ಾರ, ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಹಾಗೂ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಸಹಾಯಕ ಆಯುಕ್ತ ಶಾ ಆಲಂ ಹುಸೇನ್, ಸಿಪಿಐ ಸುನಿಲ್ ಮೂಲಿಮನಿ, ಟ್ರಾಫಿಕ್ ಪೊಲೀಸ್ ಮಹಿಬೂಬ್ ಅಲಿ, ಮುಖಂಡರಾದ ಲಾಯಕ್ ಹುಸೇನ್ ಬಾದಲ್, ಅಬ್ದುಲ್ ಕರೀಮ್ ದಾದೂ, ಶಂಕರ್ ಸೋನಾರ್, ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಸಿರವಾರ, ಶೇಖ್ ಇಮ್ರಾನ್, ಮಂಜುನಾಥ ಗುರುಸುಣಿಗಿ, ಕಮಲ್ ಪಾಷ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net