

ಅರಸೀಕೆರೆ: ಸಮಾಜಮುಖಿ ಚಟುವಟಿಕೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಕಲ್ಪತರು ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಎಚ್.ಬಿ.ಲೋಕೇಶ್(ಬಾಬು) ಹೇಳಿದರು.
ನಗರದ ರೈಲ್ವೆ ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಮೈಲಾರ್ ಕಂಫರ್ಟ್ಸ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಸಂಸ್ಥೆ ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಜಾಗೃತಿ, ರಕ್ತದಾನ ಶಿಬಿರ ಸೇರಿ ನೂರಾರು ಜನೋಪಯೋಗಿ ಕಾರ್ಯಗಳನ್ನು ಆಯೋಜಿತ್ತಿರುವುದು ಹೆಮ್ಮೆಯ ಸಂಗತಿ. ಇದೀಗ ಅಧ್ಯಕ್ಷನಾಗಿ ಹೊಸ ಜವಾಬ್ದಾರಿಯನ್ನು ಎಲ್ಲರ ಸಹಕಾರದಿಂದ ಸಮರ್ಥವಾಗಿ ನಿಭಾಯಿಸಲಾಗುವುದು ಎಂದರು.
ಜಿಲ್ಲಾ ಮುಖ್ಯ ಸಂಯೋಜಕ ಲಯನ್ ಎಚ್.ಎಂ.ತಾರಾನಾಥ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಸಾಪ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ ಮಾತನಾಡಿದರು. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ತಾಲೂಕಿನ ಧನುಷ್‌ಕುಮಾರ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿವರನ್ನು ಸನ್ಮಾನಿಸಲಾಯಿತು.
ನಿಕಟಪೂರ್ವ ಅಧ್ಯಕ್ಷ ಪಿ.ಎಸ್.ಮಂಜುನಾಥ್, ಕಾರ್ಯದರ್ಶಿ ಎಂ.ವೈ.ಖಾನ್, ಎಚ್.ಬಿ.ಸತೀಶ್, ಖಜಾಂಚಿ ಡಾ.ರಜತ್, ಮಾಜಿ ಅಧ್ಯಕ್ಷ ವೆಂಕಟೇಶ್, ನಿಯೋಜಿತ ಕಾರ್ಯದರ್ಶಿ ಡಾ.ಬಿ.ಆರ್.ವರದರಾಜು, ಪ್ರೊ.ಗೋವಿಂದರಾಜು ಇತರರಿದ್ದರು.