ಸಾಮಾಜಿಕ ಕ್ರಾಂತಿಯ ಹರಿಕಾರ

Published on

ವಿಜಯಪುರ : 12ನೇ ಶತಮಾನದಲ್ಲಿ ಬಸವಣ್ಣನವರು ಸಮ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಸಾಮಾಜಿಕ ಕ್ರಾಂತಿಗೆ ಮಾಡಿದರು ಎಂದು ಎಸ್​. ಕುಮಾರ ವಿದ್ಯಾವರ್ಧಕ ಸಂಸ್ಥೆ ಸಂಸ್ಥಾಪಕ ಎಸ್​ ಕುಮಾರ ಹೇಳಿದರು.

ನಗರ ಹೊರ ವಲಯದ ಬರಟಗಿ ರಸ್ತೆಯಲ್ಲಿರುವ ಎಸ್​. ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಎಸ್​. ಕುಮಾರ ಮಹೇಶ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮಕ್ಕಳಿಗೆ ಸಿಹಿ ವಿತರಿಸಿ ಅವರು ಮಾತನಾಡಿದರು.

ಬಸವಣ್ಣನರು ಸಮಾನತೆ, ಸಾಮಾಜಿಕ ನ್ಯಾಯ, ಕಾಯಕಯೋಗ, ಮಹಿಳಾ ಸಬಲೀಕರಣ, ದಲಿತೋದ್ಧಾರ ಮತ್ತು ಸಾಮಾಜಿಕ ಕ್ರಾಂತಿಯ ಸಂದೇಶಗಳನ್ನು ಜನತೆಗೆ ನೀಡುವ ಮೂಲಕ ಹಲವು ಸಾಮಾಜಿಕ ಮೌಢ್ಯಗಳಿಗೆ ಉತ್ತರವನ್ನು ತಮ್ಮ ವಚನಗಳ ಮೂಲಕ ಸಾರಿ ಹೇಳಿದವರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net