

ಬಾಗಲಕೋಟೆ: ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗುವ ಸುದ್ದಿ, ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ದೃಶ್ಯಗಳ ಮೇಲೆ ತೀವ್ರ ನಿಗಾವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು ಮುದ್ರಣ, ವಿದ್ಯುನ್ಮಾನ ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗುವAತಹ ಪ್ರಕರಣ ಕಂಡು ಬಂದಲ್ಲಿ, ಅವುಗಳನ್ನು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ ದಾಖಲಿಸಲಿದೆ. ಕಾಸಿಗಾಗಿ ಸುದ್ದಿ (ಪೇಯ್ಡ ನ್ಯೂಸ್) ಮೇಲೆ ಹೆಚ್ಚಿನ ನಿಗಾವಹಿಸಲಾಗುತ್ತಿದೆ. ಸಮೂಹ ಮಾಧ್ಯಮದಲ್ಲಿ ಜಾಹೀರಾತು ಕುರಿತ ವಿಷಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸ್ಥಾಪಿಸಲಾದ ದಿನ ೨೪ ಗಂಟೆಗೆ ನಿಯಂತ್ರಣ ಕೊಠಡಿಯಲ್ಲಿ ಮುದ್ರಣ ಮಾದ್ಯಮ ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಸಾರವಾಗುವ ಸುದ್ದಿಗಳ ಪರಿಶೀಲನೆ ಕಾರ್ಯ ದಿನ ೨೪ ಗಂಟೆಗಳ ಕಾಲ ನಡೆಯುತ್ತಿದೆ. ಮೂರು ಸಿಪ್ಟ್ಗಳಲ್ಲಿ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ.
ವಿದ್ಯುನ್ಮಾನದ ಮಾದ್ಯಮಗಳಲ್ಲಿ ಪ್ರಸಾರವಾಗುವ ಪ್ರತಿಯೊಂದು ದೃಶ್ಯಗಳನ್ನು ಸಿಬ್ಬಂದಿಗಳು ವೀಕ್ಷಣೆ ಮಾಡುತ್ತಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗುವಂತಹ ದೃಶ್ಯಗಳನ್ನು ದಾಖಲಿಸಲಾಗುತ್ತದೆ. ಮುಂದಿನ ಕ್ರಮಕ್ಕಾಗಿ ಮಾಹಿತಿ ರವಾನಿಸಲಾಗುತ್ತಿದೆ. ಸಾಮಾಜಿಕ ಜಾಲ ತಾಣಗಳ ಮೇಲೂ ನಿಗಾ ವಹಿಸಲಾಗುತ್ತಿದ್ದು, ಅದಕ್ಕಾಗಿಯೇ ಪ್ರತ್ಯೇಕ ಕೋಶ ತೆರೆಯಲಾಗಿದೆ. ಸಿಬ್ಬಂದಿಗಳು ನಿಗಾ ವಹಿಸುತ್ತಿದ್ದಾರೆಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.