

ಅರಕಲಗೂಡು: ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಅವಶ್ಯಕತೆಗೆ ಅನುಗುಣವಾಗಿ ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಪೊಲೀಸ್ ಕಾನ್‌ಸ್ಟೇಬಲ್ ಹೇಮಂತಕುಮಾರ್ ಕಿವಿಮಾತು ಹೇಳಿದರು.
ತಾಲೂಕಿನ ಬಸವಾಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನಿವೃತ್ತ ಶಿಕ್ಷಕ ಶ್ರೀಕಂಠಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸೈಬರ್ ಅಪರಾಧಗಳ ಕುರಿತು ಜಾಗೃತಿ ಬೆಳೆಸಿಕೊಳ್ಳಬೇಕು. ಸಾಮಾಜಿಕ ಹಾಗೂ ಧಾರ್ಮಿಕವಾಗಿ ಧಕ್ಕೆ ತರುವ ಯಾವುದೇ ರೀತಿಯ ವೈಯಕ್ತಿಕ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಹೇಂದ್ರಕುಮಾರ್, ಪರಿಷತ್ತಿನ ಜಯಶಂಕರ್, ಕುಸುಮಾ, ಶ್ರೀನಿವಾಸ್, ಸಿದ್ದರಾಜು, ಅಮೃತೇಶ್, ಉಪನ್ಯಾಸಕರಾದ ಸಂಧ್ಯಾ, ಪ್ರಮೀಳಾ, ಮಂಜುನಾಥ್, ಸಿಂಚನಾ, ಹರೀಶ್ ಇತರರಿದ್ದರು.