

ಕೆ.ಆರ್.ನಗರ: ಪಟ್ಟಣದ ಪುರಸಭೆಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಐದನೇ ವಾರ್ಡ್‌ನ ಸದಸ್ಯ ಸಿ.ಶಂಕರ್ ಅವಿರೋಧವಾಗಿ ಆಯ್ಕೆಯಾದರು.
ಇಲ್ಲಿನ ಪುರಸಭೆಯ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಮಿಕ್ಸರ್ ಶಂಕರ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿದರು. ಇವರೊಂದಿಗೆ ಸ್ಥಾಯಿ ಸಮಿತಿ ಸದಸ್ಯರಾಗಿ ಶಾರದಾ ನಾಗೇಶ್, ಶಂಕರ್ ಸ್ವಾಮಿ, ಪಲ್ಲವಿ ಆನಂದ್ ಮತ್ತು ಸೌಮ್ಯಾ ಲೋಕೇಶ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಪುರಸಭಾ ಅಧ್ಯಕ್ಷರು ಮಾಹಿತಿ ನೀಡಿದರು.
ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶಂಕರ್ ಅವರನ್ನು ಪುರಸಭೆ ಅಧ್ಯಕ್ಷ ಶಿವುನಾಯಕ್, ಉಪಾಧ್ಯಕ್ಷೆ ವಸಂತಮ್ಮ, ಮುಖ್ಯಾಧಿಕಾರಿ ಬಿ.ವಿ.ವೆಂಕಟೇಶ್ ಮತ್ತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಸದಸ್ಯರು ಅಭಿನಂದಿಸಿದರು.