ಸಾಮಾಜಿಕ ನ್ಯಾಯಕ್ಕಾಗಿ ನಾವು ಗೆಲ್ಲಲೇಬೇಕು

IMG-20200927-WA0179
Published on

ಗೌರಿಬಿದನೂರು: ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರೆಯಬೇಕಾದರೆ ಮುಂಬರುವ ಗ್ರಾಪಂ ಚುನಾವಣೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಗೆಲ್ಲಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಎಂ.ನರಸಿಂಹಮೂರ್ತಿ ಹೇಳಿದರು.

ಮೆಳ್ಯಾದಲ್ಲಿ ಭಾನುವಾರ ಆಯೋಜಿಸಿದ್ದ ಪಂಚಾಯಿತಿ ವ್ಯಾಪ್ತಿಯ ಮುಖಂಡರ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಗ್ರಾಪಂ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭಾ ಚುನಾವಣೆಗೆ ಅಡಿಪಾಯವಾಗಲಿದೆ. ಆದ್ದರಿಂದ ಗ್ರಾಪಂ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಸೇವಾ ಮನೋಭಾವವುಳ್ಳ ಹಾಗೂ ಗೆಲ್ಲುವ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂದರು.

ಏಷಿಯನ್ ಫ್ಯಾಬ್ಟೆಕ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಚ್.ಪುಟ್ಟಸ್ವಾಮಿಗೌಡ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡಬೇಕು. ಉಳಿದಂತೆ ಅಭಿವೃದ್ಧಿ ಕೆಲಸಗಳ ಕಡೆ ಗಮನಹರಿಸಬೇಕು. ದ್ವೇಷ, ಅಸೂಯೆಗಳನ್ನು ಮರೆತು ಜನರ ಪ್ರೀತಿ ವಿಶ್ವಾಸ ಗಳಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಮುಖಂಡ ಚಿಕ್ಕಕುರುಗೋಡು ಸೋಮಶೇಖರರೆಡ್ಡಿ, ಜಿಪಂ ಮಾಜಿ ಅಧ್ಯಕ್ಷ ಎಚ್ ವಿ. ಮಂಜುನಾಥ್ , ಕೋಚಿಮುಲ್ ಮಾಜಿ ಅಧ್ಯಕ್ಷ ಜೆ. ಕಾಂತರಾಜು, ಜಿಪಂ ಮಾಜಿ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಜಿ.ಕೆ.ಸತೀಶ್‌ಕುಮಾರ್, ಅಬ್ದುಲ್ಲಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net