ಸಾಮಾಜಿಕ ನ್ಯಾಯದ ಬಜೆಟ್

BN CHANDRAPPA
Published on

ಚಿತ್ರದುರ್ಗ: ಗ್ಯಾರಂಟಿ ಸೇರಿ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಮೀಸಲಿಟ್ಟು ಆರ್ಥಿಕ ಚಿಂತಕರು, ವಿಪಕ್ಷ ನಾಯಕರೇ ನಿಬ್ಬೇರಾಗಾಗುವ ರೀತಿ ಉದ್ಯೋಗ, ಆರೋಗ್ಯ, ಶಿಕ್ಷಣ, ಕೃಷಿ, ಸಾಮಾಜಿಕ ಸೇರಿ ಎಲ್ಲ ಕ್ಷೇತ್ರಗಳಿಗೆ ಹಣದ ಹೊಳೆಯನ್ನೇ ಹರಿಸಿದ್ದಾರೆ ಎಂದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ 500 ಕೋಟಿ ರೂ. ಘೋಷಣೆ ಸ್ವಾಗತಾರ್ಹ. ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುಗಾರಿಕೆ ಅಭಿವೃದ್ಧಿಗೆ, ಅಡಕೆ ಬೆಳೆ ರೋಗ ತಡೆಗೆ, ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯುವ ನಿರ್ಧಾರಕ್ಕೆ ಅಧಿಕೃತ ಒಪ್ಪಿಗೆ, ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಜಿಲ್ಲೆಯ 75ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಉತ್ತಮ ಬೆಳವಣಿಗೆ. ಇದು ಪ್ರಗತಿಪರ ಬಜೆಟ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net