ಸಾಮಾಜಿಕ ಬದಲಾವಣೆಯ ಕನ್ನಡಿಯಾಗಿ ಕೆಲಸ ಮಾಡಲಿ

11KUDLIGI1
Published on

ಕೂಡ್ಲಿಗಿ: ಮಾಧ್ಯಮಗಳು ಸಾಮಾಜಿಕ ಬದಲಾವಣೆಯ ಕನ್ನಡಿಯಾಗಿ ಕೆಲಸ ಮಾಡಲಿ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ಪಟ್ಟಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು. ಸಂವಿಧಾನದ ಅಭಿವ್ಯಕ್ತಿ ಸ್ವಾತಂತ್ರೃದ ಮತ್ತೊಂದು ರೂಪವೇ ಮಾಧ್ಯಮವಾಗಿದೆ. ಶಾಸಕಾಂಗ, ಕಾಯಾರ್ಂಗ, ನ್ಯಾಯಾಂಗದ ಕಾರ್ಯವೈಖರಿಯನ್ನು ಜನರಿಗೆ ತಿಳಿಸುವ ಕೆಲಸವನ್ನು ಪತ್ರಿಕೆಗಳು ವಸ್ತುನಿಷ್ಠವಾಗಿ ಮಾಡಬೇಕು ಎಂದರು.

ಇತ್ತೀಚಿಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿಯಾಗಿ ಕೂಡ್ಲಿಗಿ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚಿಸಲಾಗಿತ್ತು. ಆದರೆ ಕೆಲ ಮಾಧ್ಯಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಯನ್ನು ಬದಲಾವಣೆ ಮಾಡುವಂತೆ ಜಿಲ್ಲೆಯ ಶಾಸಕರು ಒತ್ತಾಯಿಸಿದ್ದಾರೆ ಎಂದು ಸುದ್ದಿ ಬಿತ್ತರಿಸಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ್, ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಣ್ಣ, ಜಿಪಂ ಮಾಜಿ ಉಪಾಧ್ಯಕ್ಷೆ ದೀನಾ ಮಂಜುನಾಥ್, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಶುಕೂರ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ, ಕಾರ್ಯದರ್ಶಿ ಕೆ.ಲಕ್ಷ್ಮಣ, ರಾಜ್ಯ ಸಮಿತಿ ಸದಸ್ಯ ವೆಂಕೋಬ ನಾಯಕ, ಪ್ರಮುಖರಾದ ಟಿ.ಜಿ.ನಾಗರಾಜಗೌಡ, ಡಾ. ಕೆ.ಎಂ.ರವಿಕುಮಾರ್, ಎರಿಸ್ವಾಮಿ ಬಣವಿಕಲ್ಲು, ಸಿ.ಕೆ.ನಾಗರಾಜ, ಅಜ್ಜನಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net