

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿÄಂದ ಯಾವ ಕುಟುಂಬವು ಹೊರಗುಳಿಯದಂತೆ ನಿಗಾವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಮಂಗಳವಾರ ೨೦೨೫-೨೬ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕುರಿತ ಜಿಲ್ಲಾ ಮಟ್ಟದ ಸಂಘ ಸಂಸ್ಥೆಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಮ್ಮ ಜಿಲ್ಲೆಯಲ್ಲಿ ವಲಸೆಗಾರರು, ಪಡಿತರ ಚೀಟಿ ಇಲ್ಲದವರು, ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಯಾವುದೇ ಕುಟುಂಬದವರಿದ್ದರೂ ಅಂಥವರೂ ಕೂಡ ಸಮೀಕ್ಷೆಗೆ ಒಳಪಡಲಿದ್ದಾರೆ. ಆಧಾರ ಕಾರ್ಡ್ ಹೊಂದಿದ್ದ ಬೇರೆ ರಾಜ್ಯ ಬೇರೆ ಜಿಲ್ಲೆಯ ಕುಟುಂಬದವರು ನಮ್ಮ ಜಿಲ್ಲೆಯಲ್ಲಿ ವಾಸಿಸುತ್ತಿದ್ದರೆ ಅಂತವರನ್ನು ಸಮೀಕ್ಷೆಗೆ ಒಳಪಡಿಸಿ ಅವರು ಯಾವ ಮನೆಯಲ್ಲಿ ವಾಸವಿದ್ದಾರೆ ಎಂದು ಗುರುತಿಸಲಾಗುತ್ತದೆ. ಮನೆ-ಮನೆ ಸಮೀಕ್ಷೆಯನ್ನು ಸೆಪ್ಟೆಂಬರ್ ೨೨ ರಿಂದ ಪ್ರಾರಂಭಿಸಿ ಆಕ್ಟೋಬರ್ ೭ ರವೆರೆಗ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಸಮೀಕ್ಷೆಗೆ ಒಳಪಡುವ ವಿದ್ಯುತ್ ಮೀಟರ್‌ನ ಆರ್.ಆರ್ ಸಂಖ್ಯೆ ಇರುವ ೩,೩೧,೭೪೦ ಕುಟುಂಬಗಳಿದ್ದು, ೨,೬೬೮ಸಮೀಕ್ಷೆದಾರರು ಸಮೀಕ್ಷ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಮೊಬೈಲ್ ಆ್ಯಪ್ ಮುಖಾಂತರ ಸಮೀಕ್ಷೆಯ ದತ್ತಾಂಶಗಳನ್ನು ಸಂಗ್ರಹಿಸಲಾಗುವುದು ಹಾಗೂ ಸುಮಾರು ೬೦ ಪ್ರಶ್ನೆಗಳಿರುತ್ತದೆ ಎಂದು ಹೇಳಿದರು.
ಈಗಾಗಲೇ ಮೆಸ್ಕಾಂ ವತಿಯಿಂದ ಪ್ರತಿ ಕುಟುಂಬಕ್ಕೆ ಖಿಏಐಈ (ಖ್ಞಿಜಿಟ್ಠಿಛಿ ಏಟ್ಠoಛಿeಟ್ಝb ಐಈ) ನಂಬರನ್ನು ಸೃಜಿಸಿ ಪ್ರತಿ ಮನೆಗೆ ಸ್ಟಿಕ್ಕರ್ ಅಂಟಿಸಲಾಗಿದೆ ಮತ್ತು ಇದನ್ನು ಜಿಯೋ ಟ್ಯಾಗ್ ಮಾಡಲಾಗುತ್ತಿದೆ. ಒಂದು ವೇಳೆ ಖಿಏಐಈ ಸ್ಪೀಕರ್ ನ್ನು ಯಾವುದೇ ಮನೆಗೆ ಅಂಟಿಸಿಲ್ಲವಾದಲ್ಲಿ ಕೂಡ ಖಿಏಐಈಯನ್ನು ಸೃಜಿಸಿಕೊಂಡು ಗಣತಿದಾರರು ಸಮೀಕ್ಷೆಯನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ. ವಿದ್ಯುತ್ ಸಂಪರ್ಕವಿಲ್ಲದೆ ಇರುವ ಮನೆಗಳ ವಿವರವನ್ನು ನೀಡಲು ತಿಳಿಸಲಾಗಿದೆ. ಈ ಮನೆಗಳನ್ನು ಸಹ ವಿಎ ಹಾಗೂ ಪಿಡಿಒಗಳ ಮೂಲಕ ಜಿಯೋ ಟ್ಯಾಗ್ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಇಂಟರ್ ನೆಟ್ ಸೌಲಭ್ಯ ಇಲ್ಲದೇ ಇರುವ ಪ್ರದೇಶಗಳಲ್ಲಿ ಸರ್ಕಾರ ಗುರುತಿಸುವ ಸರ್ಕಾರಿ ಕಟ್ಟಡಗಳಲ್ಲಿ ಸಮೀಕ್ಷೆ ಕಾರ್ಯವನ್ನು ನಡೆಸಲಾಗುವುದು. ಅಂತಹ ಸ್ಥಳಗಳಿಗೆ ಕುಟುಂಬದ ಮಾಹಿತಿದಾರರೊಬ್ಬರನ್ನು ಮಾಹಿತಿಯೊಂದಿಗೆ ಕರೆ ತರಲಾಗುವುದು. ಸಮೀಕ್ಷೆ ವೇಳೆ ದಸರಾ ರಜೆ ಇರುವುದರಿಂದ ಸಮೀಕ್ಷೆಗೆ ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ನಿಯೋಜಿಸಲಾಗುವುದು. ಶಿಕ್ಷಕರು ಕೆಲಸ ಮಾಡುವ ಗ್ರಾಮ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಮೀಕ್ಷೆದರಾದ ಶಿಕ್ಷಕರಿಗೆ ೧೫೦ ಮನೆಗಳನ್ನು ನಿಗಧಿ ಪಡಿಸಲಾಗುತ್ತದೆ. ಮಲೆನಾಡು ಭಾಗದಲ್ಲಿ ಮನೆಗಳೂ ದೂರ-ದೂರ ವಿರುವುದರಿಂದ ಒಬ್ಬರಿಗೆ ೧೦೦ ಮನೆಗಳನ್ನು ನಿಗಧಿಪಡಿಸಿ ಸಮೀಕ್ಷೆ ಮಾಡಲಾಗುತ್ತದೆ. ಪ್ರತಿ ೫೦ ಶಿಕ್ಷಕರಿಗೆ ಒಬ್ಬರು ತರಬೇತಿದಾರರಿರುತ್ತಾರೆ. ಪ್ರತಿ ೨೦ ಶಿಕ್ಷಕರಿಗೆ ಒಬ್ಬರು ಮೇಲ್ವಿಚಾರಕರಿರುತ್ತಾರೆ. ೫೦ ಮೇಲ್ವಿಚಾರಕರಿಗೆ ಒಬ್ಬ ಮಾಸ್ಟರ್ ತರಬೇತಿದಾರರಿರುತ್ತಾರೆ ಎಂದು ಮಾಹಿತಿ ನೀಡಿದರು.
ಜಿಪಂ ಸಿಇಒ ಎಚ್.ಎಸ್ ಕೀರ್ತನಾ ಮಾತನಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗುಣಮಟ್ಟದ ಡೇಟಾ ತುಂಬಾ ಮುಖ್ಯವಾಗಿದೆ. ಮುಂದಿನ ದಿನದಲ್ಲಿ ಈ ಡೇಟಾಗಳು ಬೇರೆ-ಬೇರೆ ವಿಷಯಗಳಿಗೆ ಬುನಾದಿಯಾಗುವುದರಿಂದ ಮುಂಖಡರು ತಮ್ಮ ವ್ಯಾಪ್ತಿಯ ಜನರಿಗೆ ಈ ಸಮೀಕ್ಷೆ ಬಗ್ಗೆ ಅರಿವು ಮೂಡಿಸಬೇಕು. ೬೦ ಪ್ರಶ್ನೆಗಳಿರುತ್ತದೆ ಅದರ ಬಗ್ಗೆ ಮೊದಲೇ ಉತ್ತರಗಳನ್ನು ಸಿದ್ದಪಡಿಸಿಕೊಳ್ಳುವಂತೆ ತಿಳಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಸ್ತಾಪಿಸಿ ಇದರ ಬಗ್ಗೆ ಅರಿವು ಮೂಡಿಸಬೇಕು. ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳು ೬೩೬೧೭೮೯೫೭೯ ಈ ಮೊಬೈಲ್ ನಂಬರ್ ಗೆ ವಾಟ್ಸಪ್ ಮುಖಾಂತರ ಹಾಯ್ ಎಂದು ಸಂದೇಶವನ್ನು ಕಳುಹಿಸಿ ನೋಂದಣಿ ಮಾಡಿಕೊಳ್ಳಬಹುದು. ಈಗಾಗಲೇ ಗ್ರಾಮ ಪಂಚಾಯಿತಿ ಹಾಗು ನಗರಗಳಲ್ಲಿ ಸ್ವಚ್ಚವಾಹಿನಿ ಆಟೋಗಳ ಮೂಲಕ ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಕಾಂತರಾಜ್, ಸಮಾಜ ಕಲ್ಯಾ ಇಲಾಖೆ ಉಪನಿರ್ದೆಶಕಿ ಮಾಲತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಂಘ-ಸAಸ್ಥೆಗಳ ಮುಖಂಡರು ಹಾಜರಿದ್ದರು.