ಸಾಮಾಜಿಕ ಮೂಲಸೌಕರ್ಯಕ್ಕೆ ಹೆಚ್ಚು ಹಣ

h5-raajiv rudi
Published on

ಹುಬ್ಬಳ್ಳಿ: ಕೇಂದ್ರ ಸರ್ಕಾರವು 2023-24ನೇ ಸಾಲಿನ ಬಜೆಟ್​ನಲ್ಲಿ ಸಾಮಾಜಿಕ ಮೂಲಸೌಕರ್ಯ ಅಭಿವೃದ್ಧಿಗೆ ಕಳೆದ ಸಾಲಿಗಿಂತ ಹೆಚ್ಚಿನ ಅನುದಾನವನ್ನು ಹಂಚಿಕೆ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ ಪ್ರತಾಪ ರೂಢಿ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿಗೆ 1.38 ಲಕ್ಷ ಕೋಟಿಯಿಂದ 1.59 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ಶಿಕ್ಷಣಕ್ಕೆ 1.04 ಲಕ್ಷ ಕೋಟಿಯಿಂದ 1.12 ಲಕ್ಷ ಕೋಟಿ ರೂ. ಗೆ ಹಾಗೂ ಆರೋಗ್ಯಕ್ಕೆ 86 ಸಾವಿರ ಕೋಟಿಯಿಂದ 89 ಸಾವಿರ ಕೋಟಿ ರೂ. ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು.

ದೇಶದ ರಕ್ಷಣೆಗೆ 5.93 ಲಕ್ಷ ಕೋ., ರೈಲ್ವೆಗೆ 2.41 ಕೋ. ರೂ. ಒದಗಿಸಲಾಗಿದೆ. ಒಟ್ಟಾರೆ ಬಜೆಟ್ ಗಾತ್ರ 39.45 ಲಕ್ಷ ಕೋ. ಯಿಂದ 45 ಲಕ್ಷ ಕೋ. ರೂ.ಗೆ. ಏರಿಕೆಯಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ನರೇಗಾ ಅನುದಾನ ಕಡಿತ ಮಾಡಲಾಗಿದೆ ಎಂಬ ವಿಪಕ್ಷಗಳ ಆರೋಪ ನಿರಾಧಾರ ಎಂದು ಹೇಳಿದರು.

ಕಳೆದ 8 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 11.7 ಕೋಟಿ ಮನೆಗಳನ್ನು ನಿರ್ವಿುಸಿದೆ. 10 ಕೋಟಿ ಜನರಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ. 220 ಕೋಟಿ ಕರೊನಾ ಪ್ರತಿರೋಧಕ ಲಸಿಕೆ ನೀಡಿರುವುದನ್ನು ಜಗತ್ತೇ ಮೆಚ್ಚುಗೆ ವ್ಯಕ್ತಪಡಿಸಿದೆ. 48.7 ಕೋಟಿ ಜನರ ಬ್ಯಾಂಕ್ ಖಾತೆ ತೆರೆಯಲಾಗಿದೆ. ನೇರ ನಗದು ವರ್ಗಾವಣೆ (ಡಿಬಿಟಿ)ಯಡಿ 11.4 ಕೋಟಿ ಫಲಾನುಭವಿಗಳು ಪ್ರಯೋಜನ ಪಡೆದಿದ್ದಾರೆ ಎಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net