ಸಾಮಾಜಿಕ ಶಾಂತಿ ಕದಡುವ ಅನುಮಾನ

14SIRSI1
Published on

ವಿಜಯವಾಣಿ ಸುದ್ದಿಜಾಲ ಶಿರಸಿ: ಸಾಮಾಜಿಕ ಜಾಲತಾಣಗಳಲ್ಲಿ ಧಾರ್ವಿುಕ ಮತ್ತು ಕೋಮು ಭಾವನೆಗಳಿಗೆ ಧಕ್ಕೆ ಬರುವ ಮತ್ತು ಸಮಾಜದಲ್ಲಿ ಶಾಂತಿಯನ್ನು ಕದಡುವಂತಹ ಸಂದೇಶಗಳನ್ನು ಹರಿಬಿಡುವ ಮಾಹಿತಿ ಆಧಾರದ ಮೇಲೆ 20ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳನ್ನು ಮುಂಜಾಗ್ರತೆ ಕ್ರಮವಾಗಿ ಶಿರಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿದ್ದರಿಂದ ಗಲಭೆ ಉಂಟಾಗಿ ಮೂರು ಜನರು ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಘಟನೆಯನ್ನು ಖಂಡಿಸಿ ಕೆಲವು ಸಂಘಟನೆಯ ಪುಂಡರು ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆಪ್ ಮತ್ತು ಫೇಸ್​ಬುಕ್ ಗ್ರೂಪ್​ಗಳಲ್ಲಿ ಧಾರ್ವಿುಕ ಮತ್ತು ಕೋಮು ಭಾವನೆಗಳಿಗೆ ಧಕ್ಕೆ ತರುವಂತಹ ಮತ್ತು ಸಮಾಜದಲ್ಲಿ ಶಾಂತಿಯನ್ನು ಕದಡುವಂತಹ ಸಂದೇಶಗಳನ್ನು ರವಾನಿಸಿದ್ದರು. ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಶಿರಸಿ ಉಪವಿಭಾಗದ ಡಿಎಸ್​ಪಿ ಜಿ.ಟಿ.ನಾಯಕ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net