ಸಾಮಾನ್ಯ ಮಹಿಳೆಗೆ 24ನೇ ಅವಧಿಯ ಮೇಯರ್

Published on


ಹುಬ್ಬಳ್ಳಿ : ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ 24ನೇ ಅವಧಿಯ ಮೇಯರ್, ಉಪ ಮೇಯರ್ ಮೀಸಲಾತಿ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಬುಧವಾರ ಪ್ರಕಟಿಸಿದೆ.
24ನೇ ಅವಧಿಯ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿಯನ್ನು ಸರ್ಕಾರ ನಿಗದಿಪಡಿಸಿದೆ.
ಸಧ್ಯ ಹು-ಧಾ ಮಹಾನಗರ ಪಾಲಿಕೆಯಲ್ಲಿ 21ನೇ ಅವಧಿಯ ಮೀಸಲಾತಿಯಂತೆ ಮೇಯರ್ ಆಗಿ ಈರೇಶ ಅಂಚಟಗೇರಿ ಹಾಗೂ ಉಪ ಮೇಯರ್ ಆಗಿ ಉಮಾ ಮುಕುಂದ ಅಧಿಕಾರ ವಹಿಸಿಕೊಂಡಿದ್ದಾರೆ.
22ನೇ ಅವಧಿಗೆ ಮೇಯರ್ ಸಾಮಾನ್ಯ ಮತ್ತು ಉಪ ಮೇಯರ್ ಸಾಮಾನ್ಯ ಮಹಿಳೆಗೆ ಹಾಗೂ 23ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಒಬಿಸಿ ಎ ಮತ್ತು ಉಪ ಮೇಯರ್‌ಗೆ ಪರಿಶಿಷ್ಟ ಜಾತಿಯ ಮಹಿಳಾ ಮೀಸಲಾತಿ ನಿಗದಿಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net