ಸಾಮೂಹಿಕ ಇಷ್ಟಲಿಂಗ ಪೂಜೆ

Shivkumar Swamiji
Published on

ಬೀದರ್: ಮಹಾ ಶಿವರಾತ್ರಿ ನಿಮಿತ್ತ ಇಲ್ಲಿಯ ಸಿದ್ಧಾರೂಢ ಮಠದಲ್ಲಿ ಫೆ. 18 ರಂದು ಸಂಜೆ 6ಕ್ಕೆ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಸಂಜೆ 5.30ಕ್ಕೆ ಸಿದ್ಧಾರೂಢರ ಮಹಾ ರುದ್ರಾಭಿಷೇಕ, ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ಹನ್ನೆರಡು ಜ್ಯೋತಿರ್ಲಿಂಗಗಳ ಪೂಜೆ ನಡೆಯಲಿವೆ.
ಭಕ್ತರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಠದ ಡಾ. ಚಂದ್ರಪ್ಪ ಭತಮುರ್ಗೆ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net