

ಗುಂಡ್ಲುಪೇಟೆ: ನವರಾತ್ರಿ ಉತ್ಸವದ ಅಂಗವಾಗಿ ಮುಜರಾಯಿ ಇಲಾಖೆಗೆ ಸೇರಿದ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸಲಾಯಿತು.
ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶನದ ಮೇರೆಗೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ, ಹುಲಿಗಿನಮೊರಡಿ ವೆಂಕಟರಮಣಸ್ವಾಮಿ, ಸ್ಕಂದಗಿರಿ ಪಾರ್ವತಾಂಬೆ, ತೆರಕಣಾಂಬಿ ಗ್ರಾಮದ ಶ್ರೀಲಕ್ಷ್ಮೀವರದರಾಜಸ್ವಾಮಿ ದೇವಾಲಯ, ಪಟ್ಟಣದ ಶ್ರೀ ರಾಮೇಶ್ವರ ಹಾಗೂ ವಿಜಯನಾರಾಯಣಸ್ವಾಮಿ ದೇವಸ್ಥಾನಗಳು ಸೇರಿದಂತೆ ಮುಜರಾಯಿ ಇಲಾಖೆಗೆ ಸೇರಿದ ಎಲ್ಲ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಹಿಳೆಯರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.