ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

25 ckm 7
ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಗರದ ಬೇಲೂರು ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ೨೦೨೪-೨೫ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
Published on

ಚಿಕ್ಕಮಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಗರದ ಬೇಲೂರು ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ೨೦೨೪-೨೫ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿಭಾಗದ ಎರಡು ವಿಭಾಗಗಳಲ್ಲಿ ಸಾಯಿ ಏಂಜಲ್ಸ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಬಹುಮಾನವನ್ನು ಪಡೆಯುವುದರ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ರಸಪ್ರಶ್ನೆ ವಿಭಾಗದಲ್ಲಿ ನಾಗ ಪ್ರಭಲಗುಪ್ತ ಮತ್ತು ನಿಶಾಂತ್ ಎಮ್ ಪ್ರಥಮ ಸ್ಥಾನ ಪಡೆದಿದ್ದಾರೆ.

ಚರ್ಚಾ ಸ್ಪರ್ಧೆಯಲ್ಲಿ ಗೌತಮಿ ಪಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಏಕಪಾತ್ರಾಭಿನಯ ವಿಭಾಗದಲ್ಲಿ ಸ್ತವನ ದ್ವಿತೀಯ ಬಹುಮಾನ ಹಾಗೂ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಅಮೃತ ಧನ್ಯಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.

ಅಣುವೃತ್ ರಾಷ್ಟö್ರಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಾಗಿದ್ದ ಐಶಮ್ಯ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿಯೂ ಕೂಡ ಪ್ರಥಮ ಸ್ಥಾನ ಪಡೆದಿದ್ದಾರೆ. ಜಾನಪದ ಗಾಯನದಲ್ಲಿ ನಮೃತ ಪಿ. ರಾಜ್ ತೃತೀಯ ಸ್ಥಾನ, ಭಕ್ತಿ ಗೀತೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಚಿತ್ರಕಲಾ ವಿಭಾಗದಲ್ಲಿ ಧನ್ಯ ಎಂ. ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆ ಆಡಳಿತ ಮಂಡಳಿ ಕಾರ್ಯದರ್ಶಿ ಎಂ.ಜೆ.ಕಾರ್ತಿಕ್, ಪ್ರಚಾರ್ಯ ಕೆ.ಕೆ.ನಾಗರಾಜ್ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net