ಸಾರಗೋಡು ಕುಟುಂಬಗಳಿಗೆ ಪುನರ್ವಸತಿ

28 ckm 6
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ಮನೆ.
Published on

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ೧೬ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಸಾರಗೋಡು ಮೀಸಲು ಅರಣ್ಯ ವ್ಯಾಪ್ತಿಯ ೧೮ ಕುಟುಂಬಗಳನ್ನು ಸ್ಥಳಾಂತರಿಸಿ, ಪುನರ್ ವಸತಿಗಾಗಿ ಮೂಡಿಗೆರೆ ತಾಲೂಕಿನ ಹಾದಿಓಣಿ ಗ್ರಾಮದ ಸ.ನಂ.೨೦ ಮತ್ತು ೨೧ರಲ್ಲಿ ಒಟ್ಟು ೩೩-೨೪ ಎಕರೆ ಜಮೀನನ್ನು(ಪ್ರತಿ ಕುಟುಂಬಕ್ಕೆ ೨ ಎಕರೆ ಸಾಗುವಳಿಗಾಗಿ ಹಾಗೂ ೪ ಗುಂಟೆ ವಸತಿಗಾಗಿ) ಉಚಿತ ಮಂಜೂರಾತಿಗೆ ಸಚಿವ ಸಂಪುಟ ಅನುಮೋದಿಸಿದೆ.

೧೮ ಕುಟುಂಬಗಳ ಪೈಕಿ ೨ ಕುಟುಂಬಗಳು ಸ್ಥಳಾಂತರಕ್ಕೆ ಒಪ್ಪದೇ ನ್ಯಾಯಾಲಯದ ಮೊರೆ ಹೋಗಿರುವುದರಿಂದ ೨ ಕುಟುಂಬಗಳನ್ನು ಹೊರತುಪಡಿಸಿ ಉಳಿದ ೧೬ ಕುಟುಂಬಗಳಿಗೆ ಪುನರ್‌ವಸತಿ ಕಲ್ಪಿಸಲು ನಿರ್ಧರಿಸಲಾಗಿದೆ.

ಈ ಕುಟುಂಬಗಳು ಪುನರ್ವಸತಿಗಾಗಿ ಕಳೆದ ಹಲವಾರು ವರ್ಷಗಳಿಂದ ಬೇಡಿಕೆ ಮುಂದಿಟ್ಟಿದ್ದರು. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಈ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net