ಮೈಸೂರು:ಮೈಸೂರು ಪಶ್ವಿಮ ಸಾರಿಗೆ ಕಚೇರಿಯಲ್ಲಿ ಸಾರಿಗೆ ಅಧಿಕಾರಿ, ಸಿಬ್ಬಂದಿಗಳಂತೆ ಅನಧಿಕೃತ ವ್ಯಕ್ತಿಗಳು ಕಚೇರಿಯಲ್ಲಿ ಕುಳಿತು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು 35 ಜನರ ವಿರುದ್ಧ ಎಂದು ಚಾಮರಾಜ ಮೊಹಲ್ಲಾ ಪ್ರಿನ್ಸ್ ಆಫ್ ವೆಸ್ಲಿ ರಸ್ತೆಯ ಪ್ರದೀಪ್‌ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಕಚೇರಿಯಲ್ಲಿ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಮಾತ್ರ ಪ್ರವೇಶ ಮಾಡಿ ಕೆಲಸ ಮಾಡಬೇಕು. ಆದರೆ ಪಶ್ಚಿಮ ವಲಯ ಸಾರಿಗೆ ಕಚೇರಿಯಲ್ಲಿ ಸರ್ಕಾರಿ ನೌಕರರು ಅಲ್ಲದಿದ್ದರೂ, ತಾವೇ ಸರ್ಕಾರಿ ಅಧಿಕಾರಿ, ಸಿಬ್ಬಂದಿಯಂತೆ ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಿದ್ದಾರೆ. ಇದು ಅನಧಿಕೃತವಾಗಿದ್ದು, ಇದಕ್ಕೆ ಸಾರಿಗೆ ಇಲಾಖೆಯ ಜಂಟಿ ಆಯುಕ್ತರು, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಸಹಕರಿಸುತ್ತಿದ್ದಾರೆ. ಆದ್ದರಿಂದ ತಪ್ಪಿತ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು 35 ಜನರ ಹೆಸರು ಸಹಿತ ದೂರು ನೀಡಿದ್ದು, ಈ ಬಗ್ಗೆ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.