ಸಾರಿಗೆ ವಿಭಾಗೀಯ ಭದ್ರತಾ ಇನ್‌ಸ್ಪೆಕ್ಟರ್ ಭೀಕರ ಹತ್ಯೆ

Untitled design (8)
ಹುಸೇನಪ್ಪ
Published on

ಬಳ್ಳಾರಿ: ನಗರದಲ್ಲಿ ಭಾನುವಾರ ರಾತ್ರಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೆಕೆಆರ್‌ಟಿಸಿ ವಿಭಾಗೀಯ ಭದ್ರತಾ ಇನ್‌ಸ್ಪೆಕ್ಟರ್ ಹುಸೇನಪ್ಪ(54) ಮೇಲೆ ದಾಳಿ ನಡೆಸಿ ಭೀಕರವಾಗಿ ಹತ್ಯೆಗೈದಿದ್ದಾರೆ ಎಂದು ಎಸ್ಪಿ ರಂಜಿತ್‌ಕುಮಾರ್ ಬಂಡಾರು ತಿಳಿಸಿದರು.


ನಗರದ ಕೇಂದ್ರ ಕಾರಾಗೃಹ ಬಳಿ ಆ.6ರಂದು ರಾತ್ರಿ 9 ಗಂಟೆಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೆಕ್ಯೂರಿಟಿ ಇನ್‌ಸ್ಪೆಕ್ಟರ್ ಹುಸೇನಪ್ಪ ಅವರನ್ನು ಕೊಲೆ ಮಾಡಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನವರಾದ ಹುಸೇನಪ್ಪಗೆ ಇಬ್ಬರು ಪತ್ನಿಯರಿದ್ದು, ಆಸ್ತಿ ವಿಚಾರವಾಗಿ ಕುಟುಂಬದವರೇ ಸುಪಾರಿ ನೀಡಿರಬಹುದು ಎಂಬ ಸಂಶಯವಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಕಳೆದ 20 ವರ್ಷಗಳಿಂದ ಸಾರಿಗೆ ನಿಗಮದಲ್ಲಿ ಹುಸೇನಪ್ಪ ಕರ್ತವ್ಯ ನಿರ್ವಹಿಸುತ್ತಿದ್ದರು. ಬೀದರ್‌ನಲ್ಲಿ ನಡೆಯಲಿರುವ ಚಾಲಕರ ನೇಮಕಾತಿ ಪರೀಕ್ಷೆಗೆ ತೆರಳಬೇಕಿತ್ತು. ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ದಾಳಿ ನಡೆಸಿ ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಂಪೂರ್ಣ ತನಿಖೆ ನಂತರ ಕೊಲೆಗೆ ಕಾರಣ ಗೊತ್ತಾಗಲಿದೆ. ಈ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net