

ಕಲಬುರಗಿ: ಜಿಲ್ಲೆಯ ವ್ಯಾಪ್ತಿಯ ಸಾರ್ವಜನಿಕ ಅಹವಾಲು, ಕುಂದುಕೊರತೆ ಸ್ವೀಕಾರ, ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ನ.೧೫ರಂದು ಶುಕ್ರವಾರ ಬೆಳಗ್ಗೆ ೧೦ರಿಂದ ಮಧ್ಯಾಹ್ನ ೧.೩೦ರವರೆಗೆ ಹಾಗೂ ಮಧ್ಯಾಹ್ನ ೨.೩೦ ರಿಂದ ಸಂಜೆ ೫ರವರೆಗೆ ನಗರದ ಡಾ. ಎಸ್.ಎಂ. ಪಂಡಿತ ರಂಗಮAದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ ೧೦ಕ್ಕೆ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಸಭೆ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆ ವಹಿಸಲಿದ್ದಾರೆ. ನ್ಯಾಯಾಧೀಶೆ ಎಸ್.ನಾಗಶ್ರೀ ಸೇರಿ ಜಿಲ್ಲೆಯ ಎಲ್ಲ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಂಜೆ ೫.೩೦ ರಿಂದ ೬.೩೦ರವರೆಗೆ ಡಾ.ಎಸ್.ಎಂ.ಪAಡಿತ ರಂಗಮAದಿರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ನ್ಯಾಯಾಂಗ ನೌಕರರೊಂದಿಗೆ ಲೋಕಾಯುಕ್ತ ಕಾಯ್ದೆ ಕಾನೂನು ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನ.೧೬ರಂದು ಬೆಳಗ್ಗೆ ೧೧ರಿಂದ ಮಧ್ಯಾಹ್ನ ೧.೩೦ಗಂಟೆವರೆಗೆ ಹಾಗೂ ಮಧ್ಯಾಹ್ನ ೨.೩೦ರಿಂದ ಸಂಜೆ ೫ರವರೆಗೆ ಡಾ.ಎಸ್.ಎಂ.ಪAಡಿತ ರಂಗಮAದಿರದಲ್ಲಿ ಜಿಲ್ಲೆಯ ಬಾಕಿ ಇರುವ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ಆಯೋಜಿಸಲಾಗಿದೆ.
ನ.೧೭ರಂದು ಬೆಳಗ್ಗೆ ೯ ರಿಂದ ೧೧ಗಂಟೆವರೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಕಾನುನು ಸೇವೆಗಳ ಪ್ರಾಧಿಕಾರದ ಪಾತ್ರ ಕುರಿತ ಕಾರ್ಯಕ್ರಮ ನಡೆಯಲಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಿ.ಕೆ.ಉಮೇಶ ತಿಳಿಸಿದ್ದಾರೆ.