ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಉಪವಿಭಾಗಾಧಿಕಾರಿ ಬೀಡಿಕರ

bkt-19-1
Published on

ಬಾಗಲಕೋಟೆ: ಬಾಗಲಕೋಟೆ ನಗರಸಭೆ ನೂತನ ಸಭಾಭವನದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅಧ್ಯಕ್ಷತೆಯಲ್ಲಿ ಬಾಗಲಕೋಟೆ ನಗರಸಭೆ ವ್ಯಾಪ್ತಿಯ ಜನಸಂಪರ್ಕ ಸಭೆ ಜರುಗಿತು.

ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಜರುಗಿದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಒಟ್ಟು 27 ಅಹವಾಲುಗಳನ್ನು ಸ್ವೀಕರಿಸಲಾಯಿತು. ಸ್ವೀಕೃತವಾದ ಅಹವಾಲುಗಳಿಗೆ 3 ವಾರದಲ್ಲಿ ಬಗೆಹರಿಸುವ ಕಾರ್ಯವಾಗಬೇಕೆಂದು ನಗರಸಭೆ ಅಧಿಕಾರಿಗಳಿಗೆ ಶ್ವೇತಾ ಬೀಡಿಕರ ಸೂಚಿಸಿದರು.

ಚರಂಡಿ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಕಂದಾಯ ವಿಭಾಗ, ನಲ್ಮ್ ಯೋಜನೆ, ಆಹಾರ ವಿಭಾಗ ಹಾಗೂ ಆಡಳಿತ ವಿಭಾಗದಲ್ಲಿರುವ ವಿಷಯ ಮೇಲೆ ಅಹವಾಲುಗಳಿದ್ದವು. ಮರಣ ಪ್ರಮಾಣ ಪತ್ರಕ್ಕಾಗಿ ಕಳೆದ 3 ತಿಂಗಳಿನಿಂದ ಅಲೆದಾಡುತ್ತಿದ್ದ ವ್ಯಕ್ತಿಗೆ ಒಂದು ಗಂಟೆಯೊಳಗಾಗಿ ಮರಣ ಪ್ರಮಾಣ ಪತ್ರವನ್ನು ನೀಡಲಾಯಿತು. ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲಿಯೇ ಬಗೆಹರಿಸಲು ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ರಮೇಶ ಜಾದವ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net