

ಕೊಡಗು : ವಿರಾಜಪೇಟೆ ತಾಲೂಕು ಕಚೇರಿಯಲ್ಲಿ ಬುಧವಾರ ಲೋಕಾಯುಕ್ತ ಡಿವೈಎಸ್‌ಪಿ ಪವನ್‌ಕುಮಾರ್ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ವಿರಾಜಪೇಟೆ ತಾಲೂಕಿನ ನೂರಾರು ಮಂದಿ ತಮ್ಮ ಸಮಸ್ಯೆಗಳ ಪರಿಹರಿಸುವಂತೆ ಲೋಕಾಯುಕ್ತ ಅಕಾರಿಗೆ ಅರ್ಜಿ ನೀಡಿದರು. ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿದ ಪವನ್‌ಕುಮಾರ್, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದಾಗಿ ಭರವಸೆ ನೀಡಿದರು. ಅಲ್ಲದೇ, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಗೆ ಸೇರಿದವರ ವಿರುದ್ಧ ದೂರು ನೀಡುವಾಗ ದೂರುದಾರರು ಸುಳ್ಳು ದೂರುಗಳನ್ನು ನೀಡದಂತೆ ಕೆಲವು ಸಲಹೆ ನೀಡಿದರು.
ಸಾರ್ವಜನಿಕರ ಕಾರ್ಯಗಳನ್ನು ವಿಳಂಬ ಮಾಡದಂತೆ ಸೂಚನೆ ನೀಡಿದರು. ಅಲ್ಲದೇ, ಲಂಚ ತೆಗೆದುಕೊಳ್ಳುವ ಪ್ರವೃತ್ತಿ ಬೆಳೆಸಿಕೊಂಡರೆ ಕಾನೂನು ಕ್ರಮ ಎದುರಿಸಬೇಕು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸೂಚಿಸಿದರು. ತಾಲೂಕು ತಹಸೀಲ್ದಾರ್ ರಾಮಚಂದ್ರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಅಪ್ಪಣ್ಣ , ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಇಲಾಖೆಯ ಎಂಜಿನಿರ್, ಅರಣ್ಯ ಇಲಾಖೆಯ ಅಕಾರಿಗಳು ಇದ್ದರು.