ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಿ

bkt-16-6
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಕಂದಾಯ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದರು.
Published on

ಬಾಗಲಕೋಟೆ: ಅಭಿವೃದ್ಧಿ ಕೆಲಸದಲ್ಲಿ ಬೇಜವಾಬ್ದಾರಿ ತೋರದೇ ಕಚೇರಿಗೆ ಆಗಮಿಸುವ ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಿ, ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅಧಿಕಾರಿಗಳಿಗ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಕಂದಾಯ ಹಾಗೂ ಪಂಚಾಯತ ಅಭಿವೃದ್ಧಿ ಅಽಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅಭಿವೃದ್ಧಿಪರ, ಬಡವರ ಪರ ಕೆಲಸವಾಗಬೇಕು. ಮನಸ್ಸು, ಭಾವನೆ ಜನಪರದಿಂದ ಕೂಡಿರಬೇಕು. ಅಭಿವೃದ್ದಿ ಕಾರ್ಯದಲ್ಲಿ ಜಿಲ್ಲೆ ನಂಬರ ೧ ಸ್ಥಾನದಲ್ಲಿ ಇರಬೇಕು. ಅಭಿವೃದ್ಧಿಗೆ ನನ್ನ ಸಂಪೂರ್ಣ ಬೆಂಬಲವಿರುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿರುವ ಪ್ರತಿ ತಾಲೂಕಿಗೆ ೫ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಂಡು ಆ ಗ್ರಾಮಗಳಲ್ಲಿ ಪ್ರತಿ ಮನೆಗೊಂದು ಹಾಗೂ ಶಾಲೆಗಳಲ್ಲಿ ಶೌಚಾಲಯ, ಸಾಮೂಹಿಕ ಶೌಚಗೃಹ, ಶಾಲಾ ಕಂಪೌಂಡ್ ನಿರ್ಮಾಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ವರ್ಷದಲ್ಲಿ ಮಾದರಿ ಗ್ರಾಮಗಳನ್ನಾಗಿ ರೂಪಿಸಲು ಕ್ರೀಯಾ ಯೋಜನೆಗಳನ್ನು ರೂಪಿಸಬೇಕು. ವಿವಿಧ ಇಲಾಖೆಗಳ ಜೊತೆಗೆ ಸಮನ್ವತೆ ಸಾಧಿಸಿ, ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ, ಜಿ.ಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಉಪವಿಭಾಗಾಧಿಕಾರಿಗಳಾದ ಶ್ವೇತಾ ಬೀಡಿಕರ, ಸಂತೋಷ ಕಾಮಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾ.ಪಂ ಪಿಡಿಒಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net