ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಸಾರ್ವಜನಿಕರಿಂದ ಅಹವಾಲು ಸ್ವೀಕಾರ
Published on

ಹಾಸನ: ಇಲ್ಲಿನ ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಕಾನೂನು ಪ್ರಕಾರ ಮಾಡಲು ಸಾಧ್ಯವಿದ್ದರೆ ಮಾಡಿ. ಇಲ್ಲದಿದ್ದರೆ ಯಾವ ಕಾರಣಕ್ಕೆ ಮಾಡಲು ಸಾಧ್ಯವಿಲ್ಲ ಎಂಬುದರ ಬಗ್ಗೆ ಹಿಂಬರಹ ನೀಡಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ದುರಸ್ತಿ, ಪೋಡಿ, ರಸ್ತೆ, ಖಾತೆ ಬದಲಾವಣೆ ಸೇರಿದಂತೆ ಮತ್ತಿತರರ ಅಹವಾಲುಗಳನ್ನು ಸಚಿವರು ಸ್ವೀಕರಿದರು. ಶಾಸಕ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net