ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ

Published on

ಬಳ್ಳಾರಿ : ಮಹಾನಗರ ಪಾಲಿಕೆ ವತಿಯಿಂದ ನಗರ ಆಶ್ರಯ ಯೋಜನೆಯಡಿ ಆಶ್ರಯ ಬಡಾವಣೆ ರಚನೆ ಮಾಡಿ ವಸತಿ ರಹಿತ ಕುಟುಂಬಗಳಿಗೆ ನಿವೇಶನ, ಮನೆಗಳನ್ನು ಹಂಚಿಕೆ ಮಾಡಲಾಗಿದ್ದು, ಈಗಾಗಲೇ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನಕಲು ಹಕ್ಕುಪತ್ರ, ದಾಖಲೆಗಳನ್ನು ಸೃಷ್ಠಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದ್ದು, ಸಾರ್ವಜನಿಕರು ಎಚ್ಚರ ವಹಿಸಬೇಕು. ಇಂತಹ ವ್ಯಕ್ತಿಗಳು ಕಂಡುಬಂದಲ್ಲಿ ಪಾಲಿಕೆಗೆ ದೂರು ನೀಡಬೇಕು ಎಂದು ಪಾಲಿಕೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net