ಸಾರ್ವಜನಿಕರಿಗೆ ತೊಂದರೆ ಆಗದಿರಲಿ

Manvi Health camp Health Fair Preparation
ಮಾನ್ವಿಯ ಸರ್ಕಾರಿ ಬಾಷುಮಿಯ ಸಾಹುಕಾರ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆರೋಗ್ಯ ಮೇಳದ ಸಿದ್ಧತೆಯನ್ನು ಶಾಸಕ ಹಂಪಯ್ಯ ನಾಯಕ ಪರಿಶೀಲಿಸಿದರು. ತಹಸೀಲ್ದಾರ್ ರಾಜು ಪಿರಂಗಿ, ಟಿಎಚ್‌ಒ ಶರಣಬಸವರಾಜ ಇತರರಿದ್ದರು.
Published on

ಮಾನ್ವಿ: ರಾಜ್ಯಮಟ್ಟದ ಬೃಹತ್ ಆರೋಗ್ಯ ಮೇಳದಲ್ಲಿ ತಪಾಸಣೆಗೆ ಬರುವ ಜನರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಹಂಪಯ್ಯನಾಯಕ ಸೂಚಿಸಿದರು.

ಪಟ್ಟಣದ ಸರ್ಕಾರಿ ಬಾಷುಮಿಯ ಸಾಹುಕಾರ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸುತ್ತಿರುವ ರಾಜ್ಯಮಟ್ಟದ ಅರೋಗ್ಯ ಮೇಳದ ಸಿದ್ಧತೆ ಪರಿಶೀಲಿಸಿ ಶುಕ್ರವಾರ ಮಾತನಾಡಿದರು. ಮಾ.15ರಂದು ಮೇಳವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಭಾಗವಹಿಸಲಿದ್ದಾರೆ. ವಾಹನ ನಿಲುಗಡೆಗಾಗಿ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಆಹಾರ, ಕುಡಿವ ನೀರು, ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳ ಸಮಸ್ಯೆಯಾಗಬಾರದು ಎಂದು ತಿಳಿಸಿದರು.

ಮೇಳದ ನೋಡಲ್ ಅಧಿಕಾರಿ ಡಾ.ಚಂದ್ರಶೆಖರಯ್ಯಸ್ವಾಮಿ ಮಾತನಾಡಿ, ಬೆಳಗ್ಗ್ಗೆ 8 ರಿಂದ ನೋಂದಣಿ ಆರಂಭವಾಗಲಿದೆ. ಸಾರ್ವಜನಿಕರ ಆರೋಗ್ಯ ತಪಾಸಣೆ ಮಾಡಿ, ನಂತರ ಕಾಯಿಲೆಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. 40 ಪ್ರತ್ಯೇಕ ಸ್ಟಾಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಮಹಿಳೆಯರ ತಪಾಸಣೆ ಕಾಲೇಜಿನ ಹಳೆಯ ಕಟ್ಟಡದಲ್ಲಿ ನಡೆಸಲಾಗುತ್ತದೆ. ಜನರಿಗೆ ಆರೋಗ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ರಕ್ತದಾನ ಶಿಬಿರ, ಭಾರತೀಯ ಆಯುಷ್ ವೈದ್ಯಪದ್ಧತಿಯ ಸೇವೆಗಳ ತಜ್ಞರು ಆರೋಗ್ಯ ತಪಾಸಣೆ ಮಾಡಿ, ಚಿಕಿತ್ಸೆ ನೀಡಲಿದ್ದಾರೆ ಎಂದರು.

ತಹಸೀಲ್ದಾರ್ ರಾಜು ಪಿರಂಗಿ, ತಾಲೂಕು ಆರೋಗ್ಯಾಧಿಕಾರಿ ಶರಣಬಸವರಾಜ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ್ ದೇವಮಾನೆ, ತಾಪಂ ಇಒ ಖಾಲಿದ್ ಅಹಮ್ಮದ್, ಬಿಇಒ ಚಂದ್ರಶೇಖರ ದೊಡ್ಡಮನಿ, ಪಿಎಸ್‌ಐ ವೀರನಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್‌ಸಾಬ್, ಪ್ರಮುಖರಾದ ತಿಪ್ಪಣ್ಣ ಬಾಗಲಾಡ, ಚನ್ನಬಸಪ್ಪಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net