ಸಾರ್ವಜನಿಕರಿಗೆ ಮಲೇರಿಯಾ ಜಾಗೃತಿ

8spt1
Published on

ಸೋಮವಾರಪೇಟೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂೆ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಸ್ತ್ರೀ ಶಕ್ತಿ ಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳ ಕಚೇರಿಯಿಂದ ಸಾಂಕ್ರಾಮಿಕ ರೋಗ ತಜ್ಞ ಮಂಜುನಾಥ್ ಮಾತನಾಡಿ, ಡೆಂಗೆ ಹಾಗೂ ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆ ಹಚ್ಚಿ ಸಂಪೂರ್ಣ ಚಿಕಿತ್ಸೆ ನೀಡುವುದರ ಮೂಲಕ ಗುಣಪಡಿಸಬಹುದು. ಜ್ವರದ ಲಕ್ಷಣಗಳು ಗೊತ್ತಾದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲನೆ, ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ, ಅಂಗನವಾಡಿ ಕೇಂದ್ರದ ಸಹಾಯಕಿಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net