ಸಾರ್ವಜನಿಕರಿಗೆ ಸಕಾಲಕ್ಕೆ ಸ್ಪಂದಿಸಿ

11ydg01
Published on

ಯಾದಗಿರಿ: ಬರ ನಿರ್ವಹಣೆಗೆ ಹೆಚ್ಚಿನ ನಿಗಾವಹಿಸಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ಸಾರ್ವಜನಿಕರಿಗೆ ಸಕಾಲಕ್ಕೆ ಸ್ಪಂದಿಸಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲ ಬಿ., ಸೂಚಿಸಿದ್ದಾರೆ.

ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಬರ ಪರಿಸ್ಥಿತಿ ನಿರ್ವಹಣೆ ಕುರಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಕೊರತೆ ಕಾಣದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಗ್ರಾಮಗಳ ಪಟ್ಟಿ ಮಾಡಿ. ನೀರು ಸರಬರಾಜು ಕುರಿತಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯನಿರ್ವಹಣಾ ಅಧಿಕಾರಿಗಳು ಆಯಾ ಗ್ರಾಮಗಳ ಜನರಿಗೆ ಸಂಪಕರ್ಿಸಿ ಸಮಸ್ಯೆ ಪರಿಹಾರಿಸುವ ನಿಟ್ಟಿನಲ್ಲಿ ಆಯಾ ಗ್ರಾಪಂಗಳ ಮೂಲಕ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲಿಸಬೇಕು. ಕೆಳ ಮಟ್ಟದ ಅಧಿಕಾರಿಗಳ ಮೇಲೆ ಅವಲಂಬನೆಯಾಗದೆ ಖುದ್ದಾಗಿ ಭೇಟಿ ನೀಡಿ ನೈಜ ಸ್ಥಿತಿ ಆಧಾರದ ಮೇಲೆ ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿದರ್ೇಶನ ನೀಡಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಬಗ್ಗೆ ಸೂಕ್ತ ನಿಗಾ ವಹಿಸಬೇಕು. ಜಿಲ್ಲೆಯ ತಾಲೂಕುಗಳನ್ನು ಬರಗಾಲವೆಂದು ಘೋಷಿಸಲಾಗಿದ್ದರಿಂದ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ತಕ್ಷಣ ನೋಂದಣಿ ಮಾಡಿಕೊಳ್ಳಬೇಕಾಗಿದೆ. ರೈತರಿಗೆ ಮುಂದಿನ ದಿನಗಳಲ್ಲಿ ಸಕಾಲಕ್ಕೆ ಪರಿಹಾರ ದೊರೆಯಲು ಅನುಕೂಲವಾಗುವಂತೆ, ಫ್ರೋಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳದೆ ಇರುವ ರೈತರು, ತಕ್ಷಣ ತಮ್ಮ ಸಮೀಪದ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಮೀನುಗಾರಿಕೆ, ಕಂದಾಯ ಇಲಾಖೆಯ ಕೇಂದ್ರಗಳಿಗೆ ಸಂಪಕರ್ಿಸಿ ನೋಂದಣಿ ಮಾಡಿಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net