

ಚನ್ನಮ್ಮನ ಕಿತ್ತೂರು: ತಾಲೂಕಿನ ಎಲ್ಲ ಕೆರೆಗಳನ್ನು ಕೂಡಲೇ ಸರ್ವೇ ಮಾಡಬೇಕು. ಅಲ್ಲದೆ ಐತಿಹಾಸಿಕ ರಣಗಟ್ಟಿ ಕೆರೆ ಸಮೀೆ ಮಾಡುವ ಮೂಲಕ ಹೊಸ ರೂಪ ನೀಡಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಪಂ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ತೆಮಾಸಿಕ ಸಭೆಯಲ್ಲಿ ಮಾತನಾಡಿದರು. ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಎಲ್ಲ ಯೋಜನೆಗಳು ಜನರಿಗೆ ಮುಟ್ಟಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. ಅಲ್ಲದೆ ಅಂಗವಿಕಲರು ಸೇರಿ ಅವಶ್ಯವಿರುವ ಎಲ್ಲ ಸಾಮಾಜಿಕ ಭದ್ರತಾ ಯೋಜನೆಗಳ ಲಾನುಭವಿಗಳಿಗೆ ಸರ್ಕಾರದಿಂದ ಎಲ್ಲ ಸವಲತ್ತು. ಹಾಗೂ ಪರಿಕರಗಳನ್ನು ಉಚಿತವಾಗಿ ಸಂಬಂಧಪಟ್ಟ ಅಧಿಕಾರಿಗಳು ನೀಡಬೇಕು ಎಂದರು.
ಮೀನುಗಾರಿಕೆ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಪಾಟೀಲ, ಇಲಾಖೆಯಿಂದ ಸಂಬಂಧಪಟ್ಟ ಜನತೆಗೆ ಯೋಜನೆಗಳು ದೊರೆಯುತ್ತಿಲ್ಲ. ನಿಜವಾಗಿ ಮೀನುಗಾರಿಕೆ ಮಾಡುವವರು ಯೋಜನೆಯ ಸದುಪಯೋಗ ಪಡೆಯಬೇಕಿದೆ ಎಂದರು.
ಅಧಿಕಾರಿಗಳು ಕೇವಲ ಕಚೇರಿಯಲ್ಲಿ ಕುಳಿತುಕೊಳ್ಳದೆ ಜನರಿಗೆ ಯೋಜನೆಗಳು ದೊರೆಯುತ್ತಿವೆಯೋ ಇಲ್ಲವೋ ಎಂದು ಪರಿಶೀಲಿಸಬೇಕು. ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೆಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಈ ಹಿಂದಿನ ಯೋಜನೆಗಳು ಹಾಗೂ ಅಭಿವದ್ಧಿ ಕಾರ್ಯ ಹಾಗೂ ಮುಂಬರುವ ಯೋಜನೆಗಳ ಕುರಿತು ಅ-ಧಿಕಾರಿಗಳಿಂದ ಮಾಹಿತಿ ಪಡೆದರು.
ತಹಸೀಲ್ದಾರ್ ರವೀಂದ್ರ ಹಾದಿಮನಿ, ಬೆಳಗಾವಿ ಪಶು ಇಲಾಖೆ ಅಧಿಕಾರಿ ಡಾ. ರಾಜು ಕೊಲೇರ ಸೇರಿ ವಿವಿಧ ಇಲಾಖಾಧಿಕಾರಿಗಳು ಇದ್ದರು.