ಸಾಲ ಸದ್ಬಳಕೆಗೆ ರೈತರಿಗೆ ಸಲಹೆ

23-GPT-2
ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಎಂ.ಪಿ.ಸುನಿಲ್ ಫಲಾನುಭವಿಗಳಿಗೆ ಸಾಲ ವಿತರಿಸಿದರು. ಮಹೇಶ್, ನಟೇಶ್, ಬಸವೇಶ್ ಇದ್ದರು.
Published on

ಗುಂಡ್ಲುಪೇಟೆ: ಸಹಕಾರ ಸಂಘಗಳಿಂದ ಪಡೆದ ಸಾಲವನ್ನು ರೈತರು ಸದ್ಬಳಕೆ ಮಾಡಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಬೇಕು ಎಂದು ಮೈಸೂರು- ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಎಂ.ಪಿ.ಸುನಿಲ್ ಹೇಳಿದರು.
ತಾಲೂಕಿನ ಹಂಗಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ 1.93 ಲಕ್ಷ ರೂ. ಸಾಲ ವಿತರಿಸಿ ಅವರು ಮಾತನಾಡಿದರು. ಸಹಕಾರ ಸಮ್ಮಾನ್ ಪ್ರಶಸ್ತಿಗೆ ಸಂಘ ಭಾಜನವಾಗಿದೆ. ಎಂಸಿಡಿಸಿಸಿ ಬ್ಯಾಂಕ್ ವಾಣಿಜ್ಯ ಬ್ಯಾಂಕ್‌ಗಳಿಗೆ ಕಡಿಮೆಯಿಲ್ಲದಂತೆ 130 ಕೋಟಿ ರೂ. ವಹಿವಾಟು ನಡೆಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಹೇಳಿದರು.
ಮೈಸೂರು- ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ರೈತರ ಅನುಕೂಲಕ್ಕೆ ಅಪೆಕ್ಸ್ ಬ್ಯಾಂಕಿನಿಂದ ಶೇ. 7.6 ಬಡ್ಡಿದರದಲ್ಲಿ ತಂದ ಹಣವನ್ನು ಸಹಕಾರ ಸಂಘಗಳ ಮೂಲಕ ರೈತರಿಗೆ ಶೇ. 3ರ ಬಡ್ಡಿ ದರದಲ್ಲಿ ವಿತರಿಸುತ್ತಿದೆ. ಸಹಕಾರ ಸಂಘಗಳಿಂದ ಪಡೆದ ಸಾಲವನ್ನು ಉತ್ಪಾದಕ ಕೆಲಸಗಳಿಗೆ ಬಳಸಿಕೊಂಡು ಅಭಿವೃದ್ದಿ ಹೊಂದಬೇಕು. ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಸಂಘಗಳ ಉಳಿವಿಗೆ ನೆರವಾಗಬೇಕು ಎಂದು ಹೇಳಿದರು.
ಸಂಘದ ಅಧ್ಯಕ್ಷ ಎಚ್.ಎಂ.ಮಹೇಶ್, ಮುಖಂಡರಾದ ಬಸವೇಶ, ನಟೇಶ್, ರಾಜಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net