ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

application
Published on

ಚಿತ್ರದುರ್ಗ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1 ಬೆಸ್ತ, ಅಂಬಿಗ, ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿ ಜನರು ಆ.30ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-220882ನ್ನು ಸಂಪರ್ಕಿಸಬಹುದು.
*ವಿಶ್ವಕರ್ಮ: ಹಿಂದುಳಿದ ವರ್ಗಗಳ ಪ್ರವರ್ಗ-2ಎ ಪಟ್ಟಿಯಲ್ಲಿರುವ ವಿಶ್ವಕರ್ಮ ಸಮುದಾಯದವರು ಆರ್ಥಿಕ ಅಭಿವೃದ್ಧಿಗಾಗಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಆ.31ರೊಳಗೆ ಡಿಡಿಡಿ.ಚ್ಠಚ್ಟ.್ಚಟಞ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-2237 4848/7899899039 ಯನ್ನು ಸಂಪರ್ಕಿಸಬಹುದು.
*ಮಡಿವಾಳ: ಹಿಂದುಳಿದ ವರ್ಗಗಳ ಪ್ರವರ್ಗ-2ಎ ವರ್ಗದಲ್ಲಿನ ಮಡಿವಾಳ ಮತ್ತು ಇದರ ಉಪಜಾತಿ ಜನರು ಸಾಲ ಸೌಲಭ್ಯಕ್ಕಾಗಿ ಆ.31ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಖ್ಯೆ 080-22374832/850770004/8050770005 ಅಥವಾ ಜಿಲ್ಲಾ ಕಚೇರಿ (08194-220882)ಯನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕಿ ಎಚ್.ಶಿಲ್ಪಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net