ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಇದರ ವ್ಯಾಪ್ತಿಗೆ ಒಳಪಡುವ ಇತರೆ ನಿಗಮಗಳಿಂದ 2025-26ನೇ ಸಾಲಿನ ಅರಿವು ಶೈಕ್ಷಣಿಕ, ಬಸವ ಬೆಳಗು ಯೋಜನೆ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ನೀಡುವ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು-ಶೈಕ್ಷಣಿಕ/ಬಸವ ಬೆಳಗು ಸಾಲ ಯೋಜನೆಯಡಿ ಸಿ.ಇ.ಟಿ ಮತ್ತು ಎನ್.ಇ.ಇ.ಟಿ ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್‌ಗಳ ವ್ಯಾಸಂಗಕ್ಕೆ ವಾರ್ಷಿಕ 1 ಲಕ್ಷ ರೂ. ಗಳಂತೆ ಕೋರ್ಸ್ ಅವಧಿಗೆ ಗರಿಷ್ಠ 4 ರಿಂದ 5 ಲಕ್ಷ ರೂ.ಗಳವರೆಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಸೌಲಭ್ಯ ಕಲ್ಪಿಸಲಾಗುವುದು.

ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಅಥವಾ ಸಹಾಯವಾಣಿ ಸಂಖ್ಯೆ 080-22374832 ಸಂಪರ್ಕಿಸಿ ಪಡೆಯಬಹುದು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿ ದೂ.ಸಂ 08226-223587 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net