

ಸಾಲಬಾಧೆ ತಾಳಲಾರದೆ ಆತ್ಮಹತ್ಯೆ
ಸಂಕೇಶ್ವರ: ಸಾಲಬಾಧೆಯಿಂದ ವ್ಯಕ್ತಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಬಿರೇಶ್ವರ ನಗರದಲ್ಲಿ ಮಂಗಳವಾರ ನಡೆದಿದೆ.
ಇಲ್ಲಿನ ಬಿರೇಶ್ವರ ನಗರ ನಿವಾಸಿ ಶಂಕರ ಲಕ್ಷ್ಮಣ ಪಟ್ಟೇದ(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಎಲ್‌ಐಸಿ ಏಜಂಟ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್‌ಗಳಲ್ಲಿ, ಹಾಗೂ ಕೈ ಸಾಲ ಮಾಡಿಕೊಂಡಿದ್ದಸಾಲ ತೀರಿಸಲಾಗದೆ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತರಿಗೆ ತಂದೆ,ತಾಯಿ, ಪತಿ ಇಬ್ಬರು ಪುತ್ರಿಯರು, ಓರ್ವ ಪುತ್ರ ಇದ್ದಾರೆ.
ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.