ಸಾಲಬಾಧೆಯಿಂದ ರೈತ ಆತ್ಮಹತ್ಯೆ

30-RNR-01
Published on

ರಾಣೆಬೆನ್ನೂರ: ನಿರಂತರ ಮಳೆಯಿಂದ ಬೆಳೆ ಹಾನಿ ಹಾಗೂ ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮೇಡ್ಲೇರಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ದಿಳ್ಳೆಪ್ಪ ಭೀಮಪ್ಪ ಬೂದನೂರು (50) ಮೃತ ರೈತ.

ಇವರು ಮೂರು ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ ಹಾಗೂ ಕೈಗಡವಾಗಿ 5 ಲಕ್ಷ ರೂ. ಸಾಲ ಮಾಡಿಕೊಂಡು ಭತ್ತ ನಾಟಿ ಮಾಡಿದ್ದರು. ಆದರೆ, ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಭತ್ತದ ಬೆಳೆ ಸಂಪೂರ್ಣ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net