

ಅರಸೀಕೆರೆ: ತಾಲೂಕಿನ ಬಾಳೆನಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುಟ್ಟರಾಜು(58) ಮೃತ ರೈತ. ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಕೆಲ ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಘ ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳಲ್ಲಿ ಐದಾರು ಲಕ್ಷ ರೂ.ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಈ ಸಂಬಂಧ ಗಂಡಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.