ಸಾಲಬಾಧೆಯಿಂದ ರೈತ ಆತ್ಮಹತ್ಯೆ

26Ravig5
Published on

ಬೆಳಗಾವಿ: ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. ಹೊನ್ನಿಹಾಳ ಗ್ರಾಮದ ನಿವಾಸಿ ಮಹಾಂತೇಶ ರಾಯಪ್ಪ ಕೆಂಗೇರಿ ( 45) ಆತ್ಮಹತ್ಯೆಗೆ ಶರಣಾದ ರೈತ. ಕೃಷಿ ಚಟುವಟಿಕೆಗಾಗಿ ಸೊಸೈಟಿ ಹಾಗೂ ಹಲವು ಬ್ಯಾಂಕ್‌ಗಳಲ್ಲಿ ಲಕ್ಷಾಂತರ ರೂ. ಸಾಲ ಮಾಡಿದ್ದ ಎನ್ನಲಾಗಿದ್ದು, ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಮಾರೀಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net