ಪಟ್ಟನಾಯಕನಹಳ್ಳಿ: ಶಿರಾ ತಾಲೂಕಿನ ಬಂದಕುಂಟೆ ಗ್ರಾಪಂ ವ್ಯಾಪ್ತಿಯ ಗೋವಿಂದನಹಳ್ಳಿಯಲ್ಲಿ ರೈತರೊಬ್ಬರು ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರೈತ ಜಯರಾಮಯ್ಯ (68) ಮೃತ. ಪಿಎಲ್ಡಿ ಬ್ಯಾಂಕ್ನಲ್ಲಿ 50 ಸಾವಿರ ರೂ. ಸಾಲ ಮಾಡಿದ್ದರು. ಬ್ಯಾಂಕ್ನವರು ಹಣ ಕಟ್ಟುವಂತೆ ಒತ್ತಡ ಮಾಡುತ್ತಿದ್ದ ಕಾರಣ ಬೇರೆಯವರ ಹತ್ತಿರ ಕೈ ಸಾಲ ಮಾಡಿ ಇತ್ತೀಚೆಗೆ ಕಟ್ಟಿದ್ದರು. 2 ಎಕರೆ ಜಮೀನಿನಲ್ಲಿ ಇದ್ದ ಬೆಳೆ ನೀರಿಲ್ಲದೆ ಒಣಗಿದ ಕಾರಣ ಸಾಲಭಾದೆ ಜತೆಗೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರಿಗೆ ಪುತ್ರಿ, ಇಬ್ಬರು ಪುತ್ರರು ಇದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.