

ಚಾಮರಾಜನಗರ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನದೊಂದಿಗೆ ನೇರ ಸಾಲ ಸೌಲಭ್ಯ ಪಡೆಯಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಅ.31ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಕಚೇರಿ ಸಂಪರ್ಕಿಸುವಂತೆ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.